ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು PM,FM ಹೊರತಾಗಿ ಎಲ್ಲರಿಗೂ ಗೊತ್ತಿದೆ: ರಾಹುಲ್ ಗಾಂಧಿ

Date:

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದೆಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂಬುದು ಮನವರಿಕೆಯಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಆರ್ಥಿಕತೆ, ರಕ್ಷಣಾ ವಲಯ ಮತ್ತು ವಿದೇಶಾಂಗ ನೀತಿಗಳನ್ನು ನಾಶಗೊಳಿಸಿದೆ ಎಂದು ಅವರು ಆರೋಪಿಸಿದರು.

ಸಂಸತ್ ಭವನದ ಆವರಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ‘ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಯಸಿದಂತೆ ವ್ಯಾಪಾರ ಒಪ್ಪಂದ ಏರ್ಪಡಲಿದೆ. ಟ್ರಂಪ್ ಹೇಳಿದನ್ನೆಲ್ಲ ಪ್ರಧಾನಿ ಮೋದಿ ಮಾಡಲಿದ್ದಾರೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಿಂದ ಅಮೆರಿಕಕ್ಕೆ ಆಮದಾಗುವ ಎಲ್ಲ ಸರಕುಗಳ ಮೇಲೆ ಆಗಸ್ಟ್‌ 1ರಿಂದ ಶೇಕಡ 25ರಷ್ಟು ಸುಂಕ ವಿಧಿಸಲಾಗುತ್ತದೆ ಎಂದು ಘೋಷಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬಳಿಕ ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ‘ಅವರು (ಟ್ರಂಪ್) ಸರಿಯಾಗಿಯೇ ಹೇಳಿದ್ದಾರೆ. ಭಾರತದ ಪ್ರಧಾನಿ, ಹಣಕಾಸು ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಈ ವಿಚಾರ ತಿಳಿದಿದೆ. ಅಮೆರಿಕ ಅಧ್ಯಕ್ಷರು ಸತ್ಯವನ್ನು ಹೇಳಿದ್ದಕ್ಕಾಗಿ ನನಗೆ ಸಂತೋಷವಾಗಿದೆ’ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಇರಾನ್‌ನಿಂದ ತೈಲ ಆಮದು ಆರೋಪ: ಭಾರತದ ಆರು ಕಂಪನಿಗಳ ಸೇರಿ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ

‘ಕೋಟ್ಯಧಿಪತಿ ಗೌತಮ್ ಅದಾನಿ ಅವರಿಗೆ ಸಹಾಯ ಮಾಡುವುದಕ್ಕಾಗಿ ದೇಶದ ಆರ್ಥಿಕತೆಯನ್ನು ಬಿಜೆಪಿ ನಾಶಗೊಳಿಸಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಭಾರತದ ವಿದೇಶಾಂಗ ನೀತಿ ಅದ್ಭುತ ಎಂದು ವಿದೇಶಾಂಗ ಸಚಿವರು ಭಾಷಣ ಮಾಡುತ್ತಾರೆ. ಆದರೆ ಒಂದೆಡೆ ಅಮೆರಿಕ ನಿಂದಿಸುತ್ತಿದ್ದು, ಮತ್ತೊಂದೆಡೆ ಚೀನಾ ಸಹ ಬೆನ್ನಟ್ಟುತ್ತಿದೆ. ಮೂರನೇಯದಾಗಿ ವಿದೇಶಗಳಿಗೆ ನಿಯೋಗಗಳನ್ನು ಕಳುಹಿಸಿದಾಗ ಯಾವುದೇ ರಾಷ್ಟ್ರವು ಪಾಕಿಸ್ತಾನವನ್ನು ಖಂಡಿಸಿಲ್ಲ. ಅವರಿಗೆ ದೇಶವನ್ನು ಮುನ್ನಡೆಸಲು ಗೊತ್ತಿಲ್ಲ’ ಎಂದು ರಾಹುಲ್ ಉಲ್ಲೇಖಿಸಿದ್ದಾರೆ.

‘ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿದ್ದೇನೆ ಎಂದು ಟ್ರಂಪ್ 20 ಸಲ ಹೇಳಿದ್ದಾರೆ. ಭಾರತಕ್ಕೆ ಐದು ಯುದ್ಧ ವಿಮಾನ ನಷ್ಟವಾಗಿದೆ ಎಂದೂ ಹೇಳಿದ್ದಾರೆ. ಈಗ ಭಾರತದ ಮೇಲೆ ಶೇ 25ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಇವೆಲ್ಲದಕ್ಕೂ ಪ್ರಧಾನಿ ಮೋದಿ ಏಕೆ ಉತ್ತರ ನೀಡುತ್ತಿಲ್ಲ? ಅವರಿಗೆ ಭಯ ಏಕೆ ಕಾಡುತ್ತಿದೆ’ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...