ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

Date:

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ ಸಾಯುತ್ತಾರೆ, ನಾಟಕವಾಡಬೇಡ” ಎಂದು ಮೇಲಧಿಕಾರಿಯೊಬ್ಬರು ಉಡಾಫೆಯ ಉತ್ತರ ನೀಡಿದ ಘಟನೆ ನಡೆದಿದೆ.

ಚೆನ್ನೈನ ಯುಕೋ ಬ್ಯಾಂಕ್‌ನ ವಲಯ ಮುಖ್ಯಸ್ಥ ಆರ್‌ಎಸ್ ಆಜಿತ್ ವಿರುದ್ಧ ಇಮೇಲ್‌ನಲ್ಲಿ ನಡೆಸಲಾಗಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಇಮೇಲ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಯ “ಸರ್ವಾಧಿಕಾರಿ, ಅಪಮಾನಕರ ವರ್ತನೆಯನ್ನು ಖಂಡಿಸಲಾಗಿದೆ.

ಈ ಆರೋಪಗಳನ್ನು ಒಬ್ಬ ನೆಟಿಜನ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಇದನ್ನು “ಭಾವನಾತ್ಮಕ ಕಿರುಕುಳ ಮತ್ತು ಸಾಂಸ್ಥಿಕ ಕ್ರೌರ್ಯ” ಎಂದು ಬಣ್ಣಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ), ಆರ್ಥಿಕ ಸೇವೆಗಳ ಇಲಾಖೆ ಮತ್ತು ಹಣಕಾಸು ಸಚಿವಾಲಯವನ್ನು ಟ್ಯಾಗ್ ಮಾಡಿ, “ಇಂತಹ ಕ್ರೂರ ಅಧಿಕಾರದ ವಿರುದ್ಧ ಯಾಕೆ ಯಾವುದೇ ಕ್ರಮವಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆರೋಪಗಳ ಬಗ್ಗೆ ಯುಕೋ ಬ್ಯಾಂಕ್ ಅಥವಾ ಅದರ ಚೆನ್ನೈ ವಲಯ ಕಚೇರಿಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಒಬ್ಬ ಅಧಿಕಾರಿ ತಾಯಿಯ ಮರಣದ ನಂತರ ರಜೆ ಕೇಳಿದಾಗ ಅದನ್ನು ನಿರಾಕರಿಸಲಾಗಿದೆ. ಮತ್ತೊಬ್ಬರು ತಮ್ಮ ಒಂದು ವರ್ಷದ ಮಗಳು ಐಸಿಯುನಲ್ಲಿ ಜೀವ–ಮರಣ ಹೋರಾಟ ನಡೆಸುತ್ತಿದ್ದರೂ ಕಚೇರಿಗೆ ಬರಬೇಕೆಂದು ಒತ್ತಾಯಿಸಿ, ಬಾರದಿದ್ದರೆ “ವೇತನವಿಲ್ಲದ ರಜೆ ” ಎಂದು ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.

ಕೆಲಸದ ಸ್ಥಳದಲ್ಲಿ ಕಿರುಕುಳದ ಪ್ರಕರಣಗಳು ವಿಶ್ವಾದ್ಯಂತ ಸಾಮಾನ್ಯವಾಗಿದೆ. ಇತ್ತೀಚೆಗೆ ಥಾಯ್‌ಲೆಂಡ್‌ನ ಕಾರ್ಖಾನೆಯೊಂದರಲ್ಲಿ 30 ವರ್ಷದ ಮಹಿಳೆಯೊಬ್ಬರು ಅನಾರೋಗ್ಯದಿಂದಾಗಿ ರಜೆ ಕೋರಿದರೂ ನಿರಾಕರಿಸಿದ ಕಾರಣ ಕೆಲಸದ ಸ್ಥಳದಲ್ಲೇ ಕುಸಿದು ಸಾವನ್ನಪ್ಪಿದ ಘಟನೆಯೂ ವರದಿಯಾಗಿದೆ.

ಈ ಆರೋಪಗಳು ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಉದ್ಯೋಗಿಗಳ ಕಷ್ಟಕರ ಪರಿಸ್ಥಿತಿಯನ್ನು ಬೆಳಕಿಗೆ ತಂದಿದ್ದು, ನೆಟ್ಟಿಗರು ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...