ಸುಪ್ರೀಂ ಕೋರ್ಟ್‌ ಆವರಣದಲ್ಲಿ ಇವಿಎಂ ಮತ ಮರುಎಣಿಕೆ; ಸೋತಿದ್ದ ಅಭ್ಯರ್ಥಿ ಗೆಲುವು

Date:

ಚುನಾವಣಾ ಇತಿಹಾಸದಲ್ಲಿ ಅಚ್ಚರಿಯ ಘಟನೆಯೊಂದು ಗುರುವಾರ ನಡೆದಿದೆ. ವಿದ್ಯುನ್ಮಾನ ಮತಯಂತ್ರ (ಇವಿಎಂ) ಮೂಲಕ ಚಲಾಯಿಸಲಾಗಿದ್ದ ಮತಗಳನ್ನು ಸುಪ್ರೀಂ ಕೋರ್ಟ್‌ ಆವರಣದಲ್ಲಿಯೇ ಮರು ಎಣಿಕೆ ನಡೆಸಲಾಗಿದೆ. ಈ ವೇಳೆ, ಹಿಂದಿನ ಫಲಿತಾಂಶದಲ್ಲಿ ಸೋತಿದ್ದಾರೆಂದು ಘೋಷಿಸಲಾಗಿದ್ದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇದು, ಚುನಾವಣಾ ಪ್ರಕ್ರಿಯೆಯ ಬಗ್ಗೆ ಭಾರೀ ಕಳವಳ ಮತ್ತು ಆತಂಕ ಹುಟ್ಟುಹಾಕಿದೆ.

ಹರಿಯಾಣದ ಪಾಣಿಪತ್ ಜಿಲ್ಲೆಯ ಬುವಾನಾ ಲುಖು ಗ್ರಾಮ ಪಂಚಾಯತಿಗೆ 2022ರ ನವೆಂಬರ್ 2ರಂದು ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೋಹಿತ್ ಕುಮಾರ್ ಎಂಬವರು ತಮ್ಮ ಪ್ರತಿಸ್ಪರ್ಧಿ ಕುಲದೀಪ್ ಸಿಂಗ್‌ ವಿರುದ್ಧ ಸೋತಿದ್ದಾರೆ ಎಂದು ಫಲಿತಾಂಶದಲ್ಲಿ ಘೋಷಿಸಲಾಗಿತ್ತು.

ಆದರೆ, ಈ ಫಲಿತಾಂಶವನ್ನು ಒಪ್ಪಿಕೊಳ್ಳದೆ, ಅನುಮಾನ ವ್ಯಕ್ತಪಡಿಸಿದ್ದ ಮೋಹಿತ್ ಕುಮಾರ್, ಸ್ಥಳೀಯ ಚುನಾವಣಾ ನ್ಯಾಯಮಂಡಳಿಯ ಮೆಟ್ಟಿಲೇರಿದ್ದರು. ನ್ಯಾಯಮಂಡಣಿಯು ಕೇವಲ ಒಂದು ಬೂತ್‌ (ನಂ.69) ಮತಗಳ ಮರುಎಣಿಕೆಗೆ ಸೂಚಿಸಿತ್ತು. ಆದರೆ, ಆ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿತ್ತು. ಬಳಿಕ, ಮೋಹಿತ್ ಕುಮಾರ್ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. “ಬುವಾನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಬೂತ್‌ಗಳ ಇವಿಎಂ ಮತಗಳನ್ನು ಸುಪ್ರೀಂ ಕೋರ್ಟ್‌ ಆವರಣದಲ್ಲಿ, ನ್ಯಾಯಾಲಯದ ರಿಜಿಸ್ಟಾರ್‌ ಕಾವೇರಿ ಅವರ ಉಸ್ತುವಾರಿಯಲ್ಲಿ ಮರುಎಣಿಕೆ ನಡೆಸಬೇಕು. ಅದನ್ನು ವಿಡಿಯೋ ಚಿತ್ರೀಕರಣ ಮಾಡಬೇಕು” ಎಂದು ಪೀಠವು ಆದೇಶಿಸಿತ್ತು.

ಅಂತಿಮವಾಗಿ, ಗುರುವಾರ, ಮತಗಳ ಮರುಎಣಿಕೆ ನಡೆದಿದೆ. ಚಲಾವಣೆಯಾಗಿದ್ದ ಒಟ್ಟು 3,767 ಮತಗಳಲ್ಲಿ ಈ ಹಿಂದೆ ಸೋತಿದ್ದಾರೆಂದು ಘೋಷಿಸಿಲಾಗಿದ್ದ ಮೋಹಿತ್ ಕುಮಾರ್ ಅವರು 1,051 ಮತಗಳು ಪಡೆದಿದ್ದಾರೆ. ಗೆದ್ದಿದ್ದಾರೆಂದು ಘೋಷಿಸಿ, ಪಂಚಾಯತಿ ಸದಸ್ಯತ್ವ ನೀಡಲಾಗಿದ್ದ ಕುಲದೀಪ್ ಸಿಂಗ್‌ 1,000 ಮತಗಳನ್ನು ಪಡೆದಿದ್ದಾರೆ.

ಹೀಗಾಗಿ, 2022ರಲ್ಲಿ ಪರಾಜಿತರೆಂದು ಘೋಷಿಸಿದ್ದ ಮೋಹಿತ್ ಅವರು 51 ಮತಗಳ ಅಂತರದಲ್ಲಿ ಕುಲದೀಪ್ ಸಿಂಗ್‌ ವಿರುದ್ಧ ಗೆದ್ದಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಈ ಲೇಖನ ಓದಿದ್ದೀರಾ?: ಕ್ಯೂಬಾ ಕ್ರಾಂತಿಯ ಕಿಡಿ, ಬಂಡವಾಳಿಗರ ದುಸ್ವಪ್ನ ಫಿಡೆಲ್ ಕ್ಯಾಸ್ಟ್ರೋ

ಮರುಎಣಿಕೆಯ ಮರದಿಯನ್ನು ಗಮನಿಸಿದ ನ್ಯಾಯಾಲಯವು, ಮೋಹಿತ್ ಕುಮಾರ್ ಅವರನ್ನೇ ಬುವಾನಾ ಲಖು ಗ್ರಾಮ ಪಂಚಾಯಿತಿಯ ನೂತನ ಸರಪಂಚ್ (ಸದಸ್ಯ) ಎಂದು ಘೋಷಿಸಿದೆ. ಎರಡು ದಿನಗಳೊಳಗೆ ಅಧಿಕೃತ ಅಧಿಸೂಚನೆ ಹೊರಡಿಸಿ, ಮೋಹಿತ್ ಕುಮಾರ್ ಅವರಿಗೆ ತಕ್ಷಣವೇ ಅಧಿಕಾರ ವಹಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಪಾಣಿಪತ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...