ಬಿಹಾರದ ಮಾಜಿ ಡಿಸಿಎಂ, ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ನಿಧನ

Date:

ಬಿಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸುಶೀಲ್ ಮೋದಿ ಅವರು ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.

“ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಮಾಜಿ ರಾಜ್ಯಸಭಾ ಸಂಸದರಾದ ಸುಶೀಲ್ ಕುಮಾರ್ ಮೋದಿ ಜಿ ಅವರ ನಿಧನಕ್ಕೆ ಶ್ರದ್ಧಾಂಜಲಿಗಳು. ಇದು ಬಿಹಾರ ಬಿಜೆಪಿಗೆ ತುಂಬಲಾರದ ನಷ್ಟ” ಎಂದು ಬಿಜೆಪಿ ಬಿಹಾರದ ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಶೀಲ್​ ಮೋದಿ ಅವರು ಸುಮಾರು 11 ವರ್ಷ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೊತೆ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ಅನಾರೋಗ್ಯದ ಹೊರತಾಗಿಯೂ ಬಿಜೆಪಿ ಸುಶೀಲ್​ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಸೇರಿಸಲಾಗಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಕ್ರಮವಾಗಿ ಸಂಚಾಲಕ ಮತ್ತು ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ರಾಜಕೀಯದಿಂದ ದೂರ ಉಳಿಯಲು ಸುಶೀಲ್​ ಮೋದಿ ನಿರ್ಧರಿಸಿದ್ದರು. ಅನಾರೋಗ್ಯ ಕಾರಣದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮಾರ್ಚ್​ನಲ್ಲಿ ತಿಳಿಸಿದ್ದರು.

ರಾಜ್ಯಸಭೆಯ ಸಂಸದರಾಗಿದ್ದ ಅವರ ಪಾರ್ಥಿವ ಶರೀರವನ್ನು ನಾಳೆ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...