ಅಣ್ಣ ಯೂಸುಫ್ ಪರ ಪ್ರಚಾರದಲ್ಲಿ ಭಾಗಿಯಾದ ಇರ್ಫಾನ್ ಪಠಾಣ್

Date:

ತೃಣಮೂಲ ಕಾಂಗ್ರೆಸ್‌ನಿಂದ ಪಶ್ಚಿಮ ಬಂಗಾಳದ ಬಹರಾಮ್‌ಪುರ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್‌ ಪಠಾಣ್ ಅವರನ್ನು ಬೆಂಬಲಿಸಿ ಸೋದರ ಇರ್ಫಾನ್‌ ಪಠಾಣ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ನಾಲ್ಕನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಇರ್ಫಾನ್‌ ಅವರು ಅಣ್ಣ ಯೂಸುಫ್‌ ಪಠಾಣ್ ಪರ ಬಹರಾಮ್‌ಪುರ್‌ ಕ್ಷೇತ್ರಕ್ಕೆ ಆಗಮಿಸಿ ಮತಯಾಚಿಸಿದರು. ಚುನಾವಣೆಯು ಮೇ 13 ರಂದು ನಡೆಯಲಿದೆ.

ರೇಜಿ ನಗರ್‌, ಬೆಲ್‌ದಂಗಾ ಸೇರಿದಂತೆ ಬಹರಾಮ್‌ಪುರ್‌ ಕ್ಷೇತ್ರದ ಹಲವು ಪ್ರದೇಶಗಳ ರೋಡ್‌ಶೋನಲ್ಲಿ ಇರ್ಫಾನ್‌ ಪಠಾಣ್ ಪಾಲ್ಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೂಸುಫ್‌ ಪಠಾಣ್ ಪರವಾಗಿ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್‌ ಬ್ಯಾನರ್ಜಿ ಬಹರಾಮ್‌ಪುರ ಕ್ಷೇತ್ರದಲ್ಲಿ ಬುಧವಾರ ಪ್ರಚಾರ ಕೈಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಕಾಶ್ ಆನಂದ್ ಗೆ ಅರ್ಧಚಂದ್ರ ಪ್ರಯೋಗ- ಮಾಯಾವತಿಯವರ ಹಿಂದೆ ಕೆಲಸ ಮಾಡಿರುವ ಶಕ್ತಿಗಳು ಯಾವುವು?

ಯೂಸುಫ್ ಅವರು ಬಹರಾಮ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಲೋಕಸಭೆಯ ಆಯಕ ಅಧೀರ್‌ ರಂಜನ್‌ ಚೌಧರಿ ವಿರುದ್ಧ ಸ್ಪರ್ಧಿಸಿದ್ದ, ಅಧೀರ್‌ ಅವರು 1999ರಿಂದ ಈ ಕ್ಷೇತ್ರದಲ್ಲಿ ಸಂಸದರಾಗಿದ್ದಾರೆ.

ಚುನಾವಣಾ ಪ್ರಚಾರದಲ್ಲಿ 2011ರ ಏಕದಿನ ವಿಶ್ವಕಪ್‌ನ ಭಾವಚಿತ್ರಗಳನ್ನು ಬಳಸಿರುವುದಕ್ಕೆ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ದೂರಿನಲ್ಲಿ, ಯೂಸುಫ್ ಪಠಾಣ್‌ ಅವರು 2011ರ ವಿಶ್ವಕಪ್‌ ಗೆಲುವಿನ ಭಾವಚಿತ್ರಗಳನ್ನು ತೋರಿಸುವುದಲ್ಲದೆ, ಬ್ಯಾನರ್‌ ಹಾಗೂ ಪೋಸ್ಟರ್‌ಗಳಲ್ಲಿ ಭಾವಚಿತ್ರಗಳನ್ನು ಬಳಸಲಾಗುತ್ತಿದೆ ಎಂದು ಪಕ್ಷ ದೂರಿನಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...