ಪಶ್ಚಿಮ ಬಂಗಾಳ| ಮಾಜಿ ನ್ಯಾಯಾಧೀಶ ಸೇರಿ ನಾಲ್ವರು ಬಿಜೆಪಿ ನಾಯಕರಿಗೆ ವಿಐಪಿ ಭದ್ರತೆ

Date:

ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ, ಮಾಜಿ ಟಿಎಂಸಿ ಸಂಸದ ಅರ್ಜುನ್ ಸಿಂಗ್ ಸೇರಿದಂತೆ ಬಿಜೆಪಿಯ ನಾಲ್ವರು ನಾಯಕರಿಗೆ ಕೇಂದ್ರ ಪಡೆಗಳ ಭದ್ರತೆಯನ್ನು ವಿಸ್ತರಿಸಲು ಗೃಹ ಸಚಿವಾಲಯ (ಎಂಎಚ್‌ಎ) ನಿರ್ಧರಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಬಿಜೆಪಿಯ ಜಿಲ್ಲಾ ಮಟ್ಟದ ನಾಯಕರಾದ ಅಭಿಜಿತ್ ಬರ್ಮನ್ ಮತ್ತು ತಪಸ್ ದಾಸ್ ಅವರಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ವಿಐಪಿ ಭದ್ರತಾ ವಿಭಾಗದ ಸಿಬ್ಬಂದಿ ಭದ್ರತಾ ರಕ್ಷಣೆಯನ್ನು ಕೇಂದ್ರ ಗೃಹ ಸಚಿವಾಲಯ ನಿಡಿದೆ.

ಇನ್ನು ಬರ್ಮನ್ ಮತ್ತು ದಾಸ್ ಅವರಿಗೆ ‘ಎಕ್ಸ್’ ವರ್ಗದಡಿ ಭದ್ರತೆ ನೀಡಲಾಗಿದೆ. ಮಾಜಿ ನ್ಯಾಯಾಧೀಶ, ಬಿಜೆಪಿ ನಾಯಕ ಗಂಗೋಪಾಧ್ಯಾಯ ಅವರಿಗೆ ‘ಝಡ್’ ಭದ್ರತೆ ನೀಡಲಾಗಿದ್ದು, ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ ಕಮಾಂಡೋಗಳು ರಕ್ಷಣೆ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಎಎಪಿ ಸಜ್ಜು; ಹೆಚ್ಚಿದ ಭದ್ರತೆ

ಗಂಗೋಪಾಧ್ಯಾಯ ಮತ್ತು ಟಿಎಂಸಿ ಸಂಸದ ಅರ್ಜುನ್ ಸಿಂಗ್ ಅವರು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರು. ಇದಾದ ಕೆಲವು ದಿನಗಳ ನಂತರ ಮಾರ್ಚ್ 27 ರಂದು ಗೃಹ ಸಚಿವಾಲಯ ಅವರಿಗೆ ಭದ್ರತೆಯನ್ನು ನೀಡಿದೆ. ಅಭಿಜಿತ್ ಬರ್ಮನ್ ಮತ್ತು ತಪಸ್ ದಾಸ್ ಅವರಿಗೆ ಮಾರ್ಚ್ 29 ರಂದು ವಿಐಪಿ ಭದ್ರತೆಯನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಂಗೋಪಾಧ್ಯಾಯ ಅವರು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಸುಮಾರು 20 ತಿಂಗಳ ಹಿಂದೆ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಬ್ಯಾರಕ್‌ಪುರ ಸಂಸದ ಅರ್ಜುನ್ ಸಿಂಗ್ ಕಳೆದ ತಿಂಗಳು ಬಿಜೆಪಿಗೆ ಮರಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು “ಭಾರತದಾದ್ಯಂತ ಏಳು ಹಂತಗಳಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಗೃಹ ಸಚಿವಾಲಯ ನಾಲ್ಕು ಬಿಜೆಪಿ ನಾಯಕರಿಗೆ ಭದ್ರತೆಯನ್ನು ನೀಡಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...