ಐಟಿ ಕಂಪನಿಯಲ್ಲಿ ಮನಬಂದಂತೆ ಗುಂಡು ಹಾರಿಸಿದ ಮಾಜಿ ಸಂಸದರ ಮೊಮ್ಮಗ; ಇಬ್ಬರಿಗೆ ಗಾಯ

Date:

ಮಾಜಿ ಸಂಸದರ ಮೊಮ್ಮಗ ಐಟಿ ಕಂಪನಿಯೊಳಗೆ ಮನಬಂದಂತೆ ಗುಂಡು ಹಾರಿಸಿ ಪಿಸ್ತೂಲ್​ನ ಹಿಂಬದಿಯಿಂದ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.

ಐಟಿ ಕಂಪನಿಯೊಳಗೆ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ವಿವೇಕ್ ಭದೌರಿಯಾ ಎಂದು ಗುರುತಿಸಲಾಗಿದ್ದು, ಆತ ಮಾಜಿ ಸಂಸದ ಅರ್ಜುನ್ ಸಿಂಗ್ ಬದೋರಿಯಾ ಅವರ ಮೊಮ್ಮಗ ಎಂದು ಹೇಳಲಾಗಿದೆ. ವಿವೇಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕಂಪನಿಯ ಕಚೇರಿಯ ಬಳಿ ಭದೌರಿಯಾ ಇದ್ದಕ್ಕಿದ್ದಂತೆ ಬಂದು ಗುಂಡು ಹಾರಿಸಿದ್ದ, ಆರೋಪಿಯು ಕಚೇರಿ ನಿರ್ವಾಹಕ ಅನುಜ್ ಕುಮಾರ್ ವೈಶ್ಯ ಮತ್ತು ಅಮಿತೇಶ್ ಶ್ರೀವಾಸ್ತವ ಅವರ ಮೇಲೆ ತನ್ನ ಪಿಸ್ತೂಲಿನ ಹಿಂಭಾಗದಿಂದ ಹಲ್ಲೆ ನಡೆಸಿದ್ದಾನೆ. ಗುಂಡು ಹಾರಿಸುವ ಮೊದಲು ಹಲವು ಉದ್ಯೋಗಿಗಳಿಗೆ ಹಲ್ಲೆ ನಡೆಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರು ಘಟನಾ ಸ್ಥಳದಿಂದ ಎರಡು ಬಂದೂಕುಗಳು, ಖಾಲಿ ಕಾರ್ಟ್ರಿಡ್ಜ್‌ಗಳು ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ ಮತ್ತು ಈ ವಿಷಯದ ಬಗ್ಗೆ ತನಿಖೆ ಮುಂದುವರೆದಿದೆ.

ಅರ್ಜುನ್ ಸಿಂಗ್ ಬದೋರಿಯಾ ಅವರು ಜನತಾ ಪಕ್ಷದಿಂದ 1977 ರಿಂದ 1980ರವರೆಗೆ ಜನತಾ ಪಕ್ಷದಿಂದ ಉತ್ತರ ಪ್ರದೇಶದ ಎತ್‌ವಾ ಕ್ಷೇತ್ರದಿಂದ ಸಂಸದರಾಗಿದ್ದರು.

ಸಿಗರೇಟ್‌ ತರಲು ನಿರಾಕರಿಸಿದ್ದಕ್ಕೆ ಗುಂಡು

ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 8 ವರ್ಷದ ಬಾಲಕನ ಹಣೆಗೆ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ವಿಪರೀತ ಚಳಿ ಎಂದು ಮನೆಯ ಹೊರಗಡೆ ಬೆಂಕಿ ಹಾಕಿಕೊಂಡು ಅದರ ಮುಂದೆ ಕುಳಿತಿದ್ದ, ಆಗ ಅದೇ ಊರಿನ ನಿತೀಶ್​ ಕುಮಾರ್ ಬಾಲಕ ಬಳಿ ಬಂದು ತುಂಬಾ ಅಂಗಡಿಯಿಂದ ಸಿಗರೇಟ್ ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.

ಈ ಸುದ್ದಿ ಓದಿದ್ದೀರಾ? ಪಿಎಫ್‌ಐ ಪ್ರಕರಣ | ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನದ ಬೆನ್ನಲ್ಲೇ ಹಲವೆಡೆ ಇಡಿ ದಾಳಿ

ತುಂಬಾ ಚಳಿ ಇದೆ ನನಗೆ ಹೋಗಲು ಸಾಧ್ಯವಿಲ್ಲ ಎಂದು ಬಾಲಕ ಹೇಳಿದ್ದಾನೆ, ಅದಕ್ಕೆ ಕೋಪಗೊಂಡ ನಿತೀಶ್ ಕುಮಾರ್ ಪಿಸ್ತೂಲ್ ಹೊರ ತೆಗೆದು ಹುಡುಗನ ಹಣೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.

ಗ್ರಾಮಸ್ಥರ ಸಹಾಯದಿಂದ ಧರಹರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಅವರನ್ನು ಉನ್ನತ ಚಿಕಿತ್ಸೆಗಾಗಿ ಮುಂಗೇರ್ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದ್ದು, ನಂತರ ಉನ್ನತ ವೈದ್ಯಕೀಯ ಸೌಲಭ್ಯಕ್ಕಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...