ಪರೀಕ್ಷೆ | ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ‘ಡಿ’ ಗ್ರೂಪ್‌ ನೌಕರ; ಪ್ರಾಂಶುಪಾಲ ಅಮಾನತು

Date:

ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದ ಉತ್ತರ ಪತ್ರಿಕೆಗಳನ್ನು ‘ಡಿ’ ಗ್ರೂಪ್‌ ನೌಕರನಿಂದ ಮೌಲ್ಯಮಾಪನ ಮಾಡಿದ್ದಾರೆ ಎಂಬ ಆರೋಪ ಮಧ್ಯಪ್ರದೇಶದ ಸರಕಾರಿ ಕಾಲೇಜೊಂದರಲ್ಲಿ ಕೇಳಿಬಂದಿದೆ. ‘ಡಿ’ ಗ್ರೂಪ್‌ ಮೌಲ್ಯಮಾಪನ ಮಾಡುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಕಾಲೇಜಿನ ಪ್ರಾಂಶುಪಾಲ ಮತ್ತು ಓರ್ವ ಪ್ರಾಧ್ಯಾಪಕರನ್ನು ಅಮಾನತು ಮಾಡಲಾಗಿದೆ.

ಮಧ್ಯಪ್ರದೇಶದ ಪೈಪರಿಯಲ್ಲಿರುವ ಭಗತ್‌ ಸಿಂಗ್ ಸರ್ಕಾರಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಉತ್ತರ ಪತ್ರಿಕೆಗಳನ್ನು ‘ಡಿ’ ಗ್ರೂಪ್‌ ಮೌಲ್ಯಮಾಪನ ಮಾಡುತ್ತಿರುವುದನ್ನು ವಿದ್ಯಾರ್ಥಿಗಳು ವಿಡಿಯೋ ಮಾಡಿಕೊಂಡಿದ್ದು, ಸ್ಥಳೀಯ ಶಾಸಕರು ಮತ್ತು ಶಿಕ್ಷಣ ಇಲಾಖೆಗೆ ದೂರು ನೀಡಿದ್ದಾರೆ. ಬಳಿಕ, ಕಾಲೇಜಿನ ಪ್ರಾಂಶುಪಾಲ ರಾಕೇಶ್ ವರ್ಮ ಮತ್ತು ಪ್ರಾಧ್ಯಾಪಕ ರಾಮ್ ಗುಲಾಂ ಪಟೇಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕಾಗಿ ಚಿಂಚ್ವಾಡದ ರಾಜಾ ಶಂಕರ್ ಶಾ ವಿಶ್ವದವಿದ್ಯಾಲಯವು ಪ್ರಾಧ್ಯಾಪಕ ರಾಮ್ ಗುಲಾಂ ಪಟೇಲ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ಭಗತ್‌ ಸಿಂಗ್‌ ಕಾಲೇಜಿಗೆ ನೇಮಿಸಿತ್ತು. ಆದರೆ, ಅವರು ಮೌಲ್ಯಮಾಪನದ ಕೆಲಸವನ್ನು ‘ಡಿ’ ಗ್ರೂಪ್‌ ನೌಕರನಿಂದ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಮಾನತುಗೊಂಡ ಪ್ರಾಂಶುಪಾಲ ರಾಕೇಶ್‌ ವರ್ಮ, “ರಾಮ್ ಗುಲಾಂ ಪಟೇಲ್ ಅವರನ್ನು ಮೌಲ್ಯಮಾಪನ ಕಾರ್ಯಕ್ಕೆ ನೇಮಿಸಲಾಗಿತ್ತು. ಅವರು ತಮ್ಮ ಕೆಲಸವನ್ನು ಬೇರೆ ನೌಕರನಿಂದ ಮಾಡಿದ್ದಾರೆ. ಆದರೆ, ಪ್ರಕರಣದಲ್ಲಿ ನನ್ನನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ತಮ್ಮ ಅಮಾನತು ಆದೇಶವನ್ನು ಹಿಂಪಡೆಯುವಂತೆ ಪ್ರೌಢ ಶಿಕ್ಷಣ ಮಂಡಳಿಗೆ ಪತ್ರ ಬರೆದಿರುವುದಾಗಿಯೂ ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...