ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎನ್ನುತ್ತೆ ಚುನಾವಣೋತ್ತರ ಸಮೀಕ್ಷೆ

Date:

ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದ್ದು, ಫೆಬ್ರವರಿ 8ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಇಂದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಬಹುತೇಕ ಎಕ್ಸಿಟ್‌ ಪೋಲ್‌ಗಳು ಬಿಜೆಪಿಗೆ ಗೆಲುವು ಎಂದು ಹೇಳಿದೆ.

ಎಎಪಿಗೆ ಸ್ಪಷ್ಟ ಬಹುಮತ ಎಂದು ದೈನಿಕ್ ಭಾಸ್ಕರ್ ಹೇಳಿದರೆ, ಉಳಿದೆಲ್ಲ ಸಮೀಕ್ಷೆಗಳು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೇಳಿದೆ. ಆಮ್‌ ಆದ್ಮಿ ಪಕ್ಷವು 43-47ರಷ್ಟು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ದೈನಿಕ್ ಭಾಸ್ಕರ್ ಬಹುಮತ ಪಡೆಯಲಿದೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | 15 ಗ್ಯಾರಂಟಿಗಳನ್ನು ಒಳಗೊಂಡ ಎಎಪಿ ಪ್ರಣಾಳಿಕೆ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮ್ಯಾಟ್ರಿಕ್ಸ್ ಪ್ರಕಾರ 32-37 ಎಎಪಿ, 35-40 ಬಿಜೆಪಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲೂ ಗೆಲುವು ಸಾಧಿಸದು. ಇನ್ನು ಜೆವಿಸಿ ಪೋಲ್ ಪ್ರಕಾರ ಎಎಪಿ 22-31, ಬಿಜೆಪಿ 39-45, ಕಾಂಗ್ರೆಸ್ 0-2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು.

ಎಎಪಿ ಬರೀ 10-19, ಬಿಜೆಪಿ 51-60 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಪೀಪಲ್ಸ್ ಪಲ್ಸ್ ಎಕ್ಸಿಟ್ ಪೋಲ್ ಹೇಳಿದೆ. ಇನ್ನು ಪಿ-ಮಾರ್‌ಕ್ಯೂ 21-31 ಎಎಪಿ, 39-49 ಬಿಜೆಪಿ, 0-1ರಷ್ಟು ಕ್ಷೇತ್ರಗಳು ಕಾಂಗ್ರೆಸ್‌ ಪಾಳಾಗಲಿದೆ ಎಂದು ಹೇಳಿದೆ. ಈ ನಡುವೆ ಪೀಪಲ್ಸ್ ಇನ್‌ಸೈಟ್ 25-29 ಕ್ಷೇತ್ರದಲ್ಲಿ ಎಎಪಿ, 40-44 ಕ್ಷೇತ್ರದಲ್ಲಿ ಬಿಜೆಪಿ, ಕೇವಲ ಒಂದರಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ ಎಂದಿದೆ.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | ಉಚಿತ ಯೋಜನೆಗಳ ಸಮರ; ಗದ್ದುಗೆ ಯಾರಿಗೆ?

ಕಳೆದ ಎರಡು ಬಾರಿ ಎಎಪಿ ದೆಹಲಿಯಲ್ಲಿ ಅಧಿಕಾರವನ್ನು ಪಡೆದುಕೊಂಡಿದೆ. ಈ ಬಾರಿಯೂ ಸಿಎಂ ಕುರ್ಚಿಯನ್ನು ತನ್ನದಾಗಿಸಿಕೊಳ್ಳಲು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪಯತ್ನ ನಡೆಸುತ್ತಿದ್ದಾರೆ. ಈ ನಡುವೆ ಬಹುತೇಕ ಸಮೀಕ್ಷೆಗಳು ಈ ಬಾರಿ ಅಧಿಕಾರ ಎಎಪಿ ಕೈ ಜಾರಿ ಬಿಜೆಪಿ ತೆಕ್ಕೆಗೆ ಸೇರಲಿದೆ ಎಂದಿದೆ. ಕಾಂಗ್ರೆಸ್ ಒಂದೆರಡು ಕ್ಷೇತ್ರದಲ್ಲಿ ಮಾತ್ರ ಗೆಲ್ಲಬಹುದು ಎಂದಿದೆ.

2013ರಲ್ಲಿ ಮೊದಲ ಬಾರಿಗೆ ಎಎಪಿ ದೆಹಲಿ ಚುನಾವಣಾ ರಂಗಕ್ಕೆ ಪ್ರವೇಶ ಪಡೆಯಿತು. 2013, 2015 ಮತ್ತು 2020ರಲ್ಲಿ ಎಎಪಿ ಉತ್ತಮ ಫಲಿತಾಂಶ ಪಡೆಯಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿತ್ತು. 2013ರಲ್ಲಿ ಎಎಪಿ ಉತ್ತಮ ಫಲಿತಾಂಶ ಪಡೆದರೂ ಗದ್ದುಗೆ ಪಡೆಯಲು ಸಫಲವಾಗಿಲ್ಲ. ಕಾಂಗ್ರೆಸ್ ಅಧಿಕಾರ ಕಳೆದುಕೊಂಡು ಬಿಜೆಪಿ ಸರ್ಕಾರ ರಚಿಸಿತು.

ಆದರೆ 2015 ಮತ್ತು 2020ರಲ್ಲಿ ಎಎಪಿ ಸ್ಪಷ್ಟ ಬಹುಮತವನ್ನು ಪಡೆದು ಸರ್ಕಾರ ರಚಿಸಿಕೊಂಡಿದೆ. ಆದರೆ ಈ ಬಾರಿ ಚುನಾವಣಾ ಸಮೀಕ್ಷೆಗಳು ಬಿಜೆಪಿಗೆ ಬಹುಮತ ಲಭಿಸಲಿದೆ ಎಂದು ಹೇಳಿದೆ. ಸಮೀಕ್ಷೆ ನಿಜವಾಗುತ್ತಾ ಎಂಬುದು ಫೆಬ್ರವರಿ 8ರಂದು ತಿಳಿಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...