ದೆಹಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಕಾರ

Date:

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

“ನಾವು ಎರಡು ಕಡೆಯ ವಾದಗಳನ್ನು ಕೇಳಿದ್ದೇವೆ. ನಾವು ಈ ಹಂತದಲ್ಲಿ ಮಧ್ಯಂತರ ರಕ್ಷಣೆಯನ್ನು ನೀಡಲು ಸಾಧ್ಯವಿಲ್ಲ. ಪ್ರತಿವಾದಿಗಳು ಪ್ರತಿಕ್ರಿಯೆ ನೀಡಲು ಸ್ವತಂತ್ರರಿದ್ದಾರೆ” ಎಂದು ಸುರೇಶ್ ಕುಮಾರ್‌ ಕೈತ್ ಹಾಗೂ ಮನೋಜ್‌ ಜೈನ್‌ ಅವರಿದ್ದ ಪೀಠ ಹೇಳಿದೆ.

ಸಮನ್ಸ್‌ ನೀಡುವುದನ್ನು ಪ್ರಶ್ನಿಸಿ ಮಧ್ಯಂತರ ರಕ್ಷಣೆ ನೀಡಲು ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯ ವಿಚಾರಣೆಯ ಮುಂದಿನ ಪರಿಗಣನೆಯನ್ನು ಏಪ್ರಿಲ್‌ 22 ಕ್ಕೆ ಕೋರ್ಟ್ ನಿಗದಿಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ಸಮನ್ಸ್‌ಗಳನ್ನು ನೀಡಿ ತಮ್ಮನ್ನು ಬಂಧಿಸಲು ಯತ್ನಿಸುತ್ತಿರುವ ಜಾರಿ ನಿರ್ದೇಶನಾಲಯದಿಂದ ರಕ್ಷಣೆ ನೀಡಬೇಕೆಂದು ಬೇಡಿಕೆಗೆ ಒತ್ತಾಯಿಸಿ ಅರವಿಂದ್ ಕೇಜ್ರಿವಾಲ್‌ ಇಂದು ಹೊಸ ಅರ್ಜಿ ಸಲ್ಲಿಸಿದ್ದರು.

“ನಾನು ಸಮನ್ಸ್‌ಗಳನ್ನು ಸ್ವೀಕರಿಸಿದರೆ ತಮ್ಮನ್ನು ಬಂಧಿಸುವುದಿಲ್ಲ ಎಂಬ ಭರವಸೆಯನ್ನು ಜಾರಿ ನಿರ್ದೇಶನಾಲಯ ನೀಡಬೇಕು” ಎಂದು ಅರವಿಂದ್‌ ಕೇಜ್ರಿವಾಲ್‌ ಕೋರ್ಟ್‌ಗೆ ತಮ್ಮ ಅರ್ಜಿಯನ್ನು ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಜಾರಿ ನಿರ್ದೇಶನಾಲಯ 9ನೇ ಸಮನ್ಸ್‌ ನೀಡಿದ ನಂತರ ಕೋರ್ಟ್‌ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪುನರಾವರ್ತಿತವಾಗಿ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳನ್ನು ಅಕ್ರಮ ಎಂದು ದೆಹಲಿ ಮುಖ್ಯಮಂತ್ರಿ ನಿರಾಕರಿಸುತ್ತಿದ್ದಾರೆ.

ಸಮನ್ಸ್‌ಗಳನ್ನು ನಿರಾಕರಿಸುತ್ತಿರುವ ಹಿನ್ನಲೆ ಜಾರಿ ನಿರ್ದೇಶನಾಲಯ ರೋಸ್‌ ಅವಿನ್ಯೂ ಕೋರ್ಟ್‌ನಲ್ಲಿ ಎರಡು ದೂರುಗಳನ್ನು ಸಲ್ಲಿಸಿದೆ.

2021-22ರಲ್ಲಿ ಜಾರಿಗೊಳಿಸಲಾಗಿದ್ದ ಅಬಕಾರಿ ಯೋಜನೆ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರದ  ಆರೋಪದ ನಂತರ ರದ್ದುಗೊಂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...