ಜ್ಞಾನವ್ಯಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ಸಂಘಟನೆ

Date:

ಜ್ಞಾನವ್ಯಾಪಿ ಮಸೀದಿಯ ತಳಭಾಗದ ಆವರಣದಲ್ಲಿ ಹಿಂದೂ ಭಕ್ತರಿಗೆ ಪೂಜೆಗೆ ಅವಕಾಶ ನೀಡಿದ ವಾರಣಾಸಿ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸ್ಥಳೀಯ ಆಡಳಿತ ಜ.31ರ ರಾತ್ರಿಯೇ ಪೂಜೆಗೆ ಅವಕಾಶ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ತುರ್ತು ವಿಚಾರಣೆ ಕೈಗೊಳ್ಳಬೇಕೆಂದು ಇಂತೆಜಾಮಿಯಾ ಮಸೀದಿ ಸಮಿತಿ ಸುಪ್ರೀಂಗೆ ಮನವಿ ಸಲ್ಲಿಸಿದೆ. ವಿಚಾರಣೆ ಈಗಾಗಲೇ ಆರಂಭವಾಗಿದೆ. ಪೂಜೆಗೆ ಅವಕಾಶ ನೀಡಿರುವುದರಿಂದ ಮಸೀದಿಯ ಸುತ್ತಲೂ ಭಾರಿ ಬಿಗಿ ಭದ್ರತೆ ಅಳವಡಿಸಲಾಗಿದೆ.

ಸ್ಥಳೀಯ ಆಡಳಿತ ಹಿಂದೂ ಅರ್ಜಿದಾರರೊಂದಿಗೆ ಭಾಗಿಯಾಗಿದೆ ಎಂದು ಮುಸ್ಲಿಂ ಸಂಘಟನೆ ಆರೋಪಿಸಿದೆ. ಈಗಾಗಲೇ ಪೂಜೆ ಆರಂಭವಾಗಿರುವುದರಿಂದ ಸ್ಥಳೀಯ ಆಡಳಿತ ಹಿಂದೂ ಅರ್ಜಿದಾರರೊಂದಿಗೆ ಭಾಗಿಯಾಗಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಹಿಂದೂ ಸಮುದಾಯದ ಕಡೆಯ ವಕೀಲರಾದ ವಿಷ್ಣು ಶಂಕರ್ ಜೈನ್, ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿರುವುದನ್ನು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯ ತಳಭಾಗದ ಮುಚ್ಚಲಾಗಿದ್ದ ಆವರಣದಲ್ಲಿ ಹಿಂದೂ ಭಕ್ತರಿಗೆ ಅವಕಾಶ ನೀಡಬೇಕೆಂದು ವಾರಣಾಸಿ ನ್ಯಾಯಾಲಯ ಜ.31 ರಂದು ಆದೇಶ ನೀಡಿತ್ತು. ಕೋರ್ಟ್ ಆದೇಶದ ಅನ್ವಯ ಮಸೀದಿಯ ನಿರ್ಬಂಧಿತ ಪ್ರದೇಶದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ.

ಶ್ರೀ ಕಾಶಿ ವಿಶ್ವನಾಥ ದೇಗುಲ ಟ್ರಸ್ಟ್ ಕೇಳಿದ ಪ್ರಶ್ನೆಗೆ ವಿಚಾರಣೆಯ ಸಮಯದಲ್ಲಿ ಜಿಲ್ಲಾ ನ್ಯಾಯಾಲಯವು ಹಿಂದೂ ಭಕ್ತರು ಪೂಜೆ ಕೈಗೊಳ್ಳುವ ಸಂದರ್ಭದಲ್ಲಿ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ನಿರ್ದೇಶಿಸಿತ್ತು.

ವಾರಣಾಸಿ ಆದೇಶ ಬಂದ ನಂತರ ಕೆಲವು ಮಹಿಳಾ ಅರ್ಜಿದಾರರು ನಿರ್ಬಂಧಿತ ಪ್ರದೇಶದಲ್ಲಿ ಉತ್ಖನನ ಹಾಗೂ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಜ್ಞಾನವ್ಯಾಪಿ ಮಸೀದಿಯನ್ನು 17ನೇ ಶತಮಾನದಲ್ಲಿ ಮೊಘಲ್ ಅರಸ ಔರಂಗಜೇಬ್‌ ದೇಗುಲವಿದ್ದ ಸ್ಥಳದಲ್ಲಿ ನಿರ್ಮಿಸಿದ್ದ ಎಂದು ಹಿಂದೂ ಅರ್ಜಿದಾರರ ವಾದವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...