ಪತ್ನಿ ಮನೆ ಕೆಲಸ ಮಾಡಲಿ ಎಂದು ಪತಿ ಬಯಸುವುದು ಹಿಂಸೆಯಲ್ಲ: ದೆಹಲಿ ಹೈಕೋರ್ಟ್

Date:

ಪತ್ನಿ ಮನೆಗೆಲಸ ಮಾಡಬೇಕು ಎಂದು ಪತಿ ಬಯಸುವುದು ಹಿಂಸೆಯೆಂದು ನಾವು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯಿಂದ ವಿಚ್ಛೇದನ ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಜೊತೆಗೆ ದಾಂಪತ್ಯ ಜೀವನದಲ್ಲಿ ಜವಾಬ್ದಾರಿಯನ್ನು ಹಂಚಿಕೊಳ್ಳುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದೆ.

ವಿಚ್ಛೇದನ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈತ್ ಮತ್ತು ನ್ಯಾಯಮೂರ್ತಿ ನೀನಾ ಬನ್ಸಾಲ್‌ ಅವರಿದ್ದ ಪೀಠವು, “ವಿವಾಹಿತ ಮಹಿಳೆ ಮನೆಗೆಲಸ ಮಾಡುವಂತೆ ಪತಿ ಹೇಳಿದರೆ, ಅದನ್ನು ಮನೆಯ ನೌಕರರಿಗೆ ಹೇಳುವ ಕೆಲಸದ ಜೊತೆ ಹೋಲಿಸಲಾಗದು. ಆ ಕೆಲಸವನ್ನು ಆಕೆಯು ಆ ಮನೆಯ, ಕುಟುಂಬದ ಮೇಲೆ ಹೊಂದಿರುವ ಪ್ರೀತಿ, ವಾತ್ಸಲ್ಯದಿಂದ ಮಾಡುವುದು ಎಂದು ಪರಿಗಣಿಸಲಾಗುತ್ತದೆ,” ಎಂದಿದೆ.

“ಇಂತಹ ಸ್ಥಿತಿಯಲ್ಲಿ ಪತಿಯು ಹಣಕಾಸು ಜವಾಬ್ದಾರಿಯನ್ನು ಹೊಂದಿರಬಹುದು, ಪತ್ನಿ ಮನೆಯ ಕೆಲಸಗಳ ಜವಾಬ್ದಾರಿಯನ್ನು ಹೊಂದಿರಬಹುದು. ಈ ಪ್ರಕರಣದಲ್ಲಿ ಅದೇ ಸ್ಥಿತಿ ಇರುವುದು. ಒಂದು ಮನೆಯಲ್ಲಿ ಕೆಲಸವನ್ನು ಹಂಚಿಕೊಂಡು ಮಾಡುವಾಗ ಪತಿಯು ಪತ್ನಿಯಲ್ಲಿ ಮನೆಗೆಲಸ ಮಾಡಲು ಹೇಳಿದರೆ ಅದು ಹಿಂಸೆ ಎನ್ನಲಾಗದು,” ಎಂದು ದೆಹಲಿ ಹೈಕೋರ್ಟ್ ಪೀಠ ಪುನರುಚ್ಛರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮದುವೆ ಎಂದರೆ ಜವಾಬ್ದಾರಿಯನ್ನು, ಪ್ರೀತಿಯನ್ನು ಹಂಚಿಕೊಳ್ಳುವುದು. ಇಬ್ಬರೂ ಕೂಡಾ ತಮ್ಮ ಸಾಮರ್ಥ್ಯಕ್ಕೆ ಮತ್ತು ಸಂದರ್ಭಕ್ಕೆ ಸರಿಯಾಗಿ ಈ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕು,” ಎಂದು ಕೋರ್ಟ್ ತಿಳಿಸಿದೆ.

ಅರ್ಜಿದಾರರು, “ನನ್ನ ಪತ್ನಿ ಮನೆಯ ಕೆಲಸ ಹಂಚಿಕೊಂಡು ಮಾಡುವುದಿಲ್ಲ, ಎಲ್ಲ ಕಾರ್ಯವನ್ನು ನಾನೇ ಮಾಡಬೇಕು, ಕೆಲಸ ಮಾಡಲು ಹೇಳಿದರೆ ಆತ್ಮಹತ್ಯೆಯ ಬೆದರಿಕೆ ಹಾಕುತ್ತಾಳೆ, ಸುಳ್ಳು ಆರೋಪಗಳನ್ನು ಮಾಡುತ್ತಾಳೆ,” ಎಂದು ತಿಳಿಸಿದ್ದಾರೆ. ಆದರೆ ಪತ್ನಿ ಈ ಆರೋಪವನ್ನು ಅಲ್ಲಗಳೆದಿದ್ದು, ವರದಕ್ಷಿಣೆಯ ಆರೋಪವನ್ನು ಪತಿಯ ಮೇಲೆ ಹೊರೆಸಿದ್ದಾರೆ.

ಇದಕ್ಕೆ ವಿಭಿನ್ನವಾಗಿ ಇತ್ತೀಚೆಗೆ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್‌, “ಮಹಿಳೆಯು ಹೆಂಡತಿ, ಗೃಹಿಣಿ ಮತ್ತು ತಾಯಿಯಾಗಿ ಅವಿಶ್ರಾಂತವಾಗಿ ಕೆಲಸ ಮಾಡುತ್ತಾಳೆ. ಮಕ್ಕಳನ್ನು ನೋಡಿಕೊಳ್ಳುವುದು ಪೂರ್ಣ ಸಮಯದ ಕೆಲಸವಾಗಿದೆ. ಮಕ್ಕಳ ಪಾಲನೆಯಲ್ಲಿ ತೊಡಗಿರುವ ಪತ್ನಿಗೆ ಪತಿಯು ಹಣ ನೀಡಬೇಕು” ಎಂದು ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...