‘ವಂದೇ ಭಾರತ್‌’ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯ ವಿತರಣೆ: ತನಿಖೆಗೆ ಆದೇಶ

Date:

ಮಂಗಳೂರು-ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಕೇರಳ ಮಾನವ ಹಕ್ಕುಗಳ ಆಯೋಗ ಆದೇಶಿಸಿದೆ.

ಇತ್ತೀಚೆಗೆ, ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಅವಧಿ ಮೀರಿದ ತಂಪು ಪಾನೀಯಗಳನ್ನು ಪ್ರಯಾಣಿಕರಿಗೆ ಪೂರೈಕೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಆ ವರದಿಗಳನ್ನು ಆಧರಿಸಿ ತನಿಖೆ ನಡೆಸುವಂತೆ ಪಾಲಕ್ಕಾಡಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಆಯೋಗವು ಆದೇಶಿಸಿದೆ. 15 ದಿನಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ.

ಪ್ರಯಾಣಿಕರಿಗೆ ನೀಡಲಾಗಿದ್ದ ತಂಪು ಪಾನೀಯ ಬಾಟಲಿಗಳ ಮೇಲೆ ತಯಾರಿಕೆಯ ದಿನಾಂಕ 2023ರ ಸೆಪ್ಟೆಂಬರ್‌ 25 ಎಂದಿದ್ದು, ಬಳಕೆಗೆ ಯೋಗ್ಯ ಅವಧಿಯು 2024ರ ಸೆಪ್ಟೆಂಬರ್ 25 ಎಂದಿತ್ತು. ಆದರೂ, ಅವುಗಳನ್ನು ವಿತರಿಸಲಾಗಿದೆ ಎಂದು ಪ್ರಯಾಣಿಕರೊಬ್ಬರು ದೂರು ನೀಡಿದ್ದರು. ಅವರ ದೂರನ್ನು ಆಹಾರ ಪೂರೈಕೆ ಸಿಬ್ಬಂದಿ ಕಡೆಗಣಿಸಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...