ಸ್ವರ್ಣ ಮಂದಿರದಲ್ಲಿ ಮೂರನೇ ಬಾರಿ ಸ್ಫೋಟ; ಐವರ ಬಂಧನ

Date:

ನಿನ್ನೆ(ಮೇ 11) ತಡರಾತ್ರಿ ಅಮೃತಸರದ ಸ್ವರ್ಣ ಮಂದಿರದ ಬಳಿ ಸ್ಫೋಟ ಸಂಭವಿಸಿದ್ದು, ಈ ಸಂಬಂಧ ಪಂಜಾಬ್ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಇಂದು ಮುಂಜಾನೆ 1 ಗಂಟೆ ಸುಮಾರಿಗೆ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಇದು ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟವಾಗಿದೆ. ಮೊದಲ ಸ್ಫೋಟ ಮೇ 6 ರಂದು, ಎರಡನೆಯ ಸ್ಫೋಟ ಸೋಮವಾರ ಸಂಭವಿಸಿತ್ತು. ಸ್ಫೋಟ ಸಂಭವಿಸಿದ ಸ್ಥಳವೂ ಸ್ವರ್ಣ ಮಂದಿರದಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಪಂಜಾಬ್ ಪೊಲೀಸರು ಸ್ಫೋಟದ ಸ್ಥಳದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಸ್ಫೋಟದಲ್ಲಿ ಯಾವುದೇ ದೊಡ್ಡ ಮಟ್ಟದ ರಾಸಾಯನಿಕಗಳನ್ನು ಬಳಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ಸ್ಫೋಟಗಳಲ್ಲಿ ಬಳಸಲಾದ ಸ್ಫೋಟಕವನ್ನು ಆರೋಗ್ಯ ಪಾನೀಯ ಕ್ಯಾನ್‌ಗಳೊಂದಿಗೆ ಪ್ಯಾಕ್ ಮಾಡಲಾಗಿತ್ತು. ಸೋಮವಾರ ನಡೆದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು. ಇಂದಿನ ಸ್ಫೋಟಕವನ್ನು ಕಚ್ಚಾ ರೀತಿಯಲ್ಲಿ ತಯಾರಿಸಲಾಗಿದ್ದು, ಯಾವುದೇ ದೊಡ್ಡ ಮದ್ದುಗಳನ್ನು ಬಳಸಲಾಗಿಲ್ಲ. ಸ್ಫೋಟಕವನ್ನು ಕಂಟೇನರ್‌ನಲ್ಲಿ ಇರಿಸಲಾಗಿತ್ತು. ಸರಣಿ ಸ್ಫೋಟದಿಂದ ಸಾರ್ವಜನಿಕರು ಆತಂಕಗೊಂಡಿದ್ದು, ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...