ಸತ್ಯಶೋಧ | 6,000 ವರ್ಷಗಳಷ್ಟು ಹಳೆಯ ಶಿವಲಿಂಗ ಪತ್ತೆ?

Date:

ಸುಮಾರು 6,000 ವರ್ಷಗಳಷ್ಟು ಹಳೆಯದಾದ ಶಿವಲಿಂಗವೊಂದು ದಕ್ಷಿಣ ಆಫ್ರಿಕಾದ ಸುದ್ವಾರ ಎಂಬ ಗುಹೆಯಲ್ಲಿ ಪತ್ತೆಯಾಗಿದೆ ಎಂಬ ಹೇಳಿಕೆಯ ಜೊತೆಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಶಿವಲಿಂಗವೊಂದರ ಚಿತ್ರವಿದ್ದು, ಹಲವರು ಹಂಚಿಕೊಳ್ಳುತ್ತಿದ್ದಾರೆ.

ವಿಡಿಯೋದಲ್ಲಿ ಶಿವಲಿಂಗದ ಚಿತ್ರದೊಂದಿದೆ ಇಂಗ್ಲಿಷ್‌ನಲ್ಲಿ, “ಹಿಂದು ಧಾರ್ಮಿಕ ಸಂಕೇತಗಳನ್ನು ನಾಶಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಆದರೂ, ಧಾರ್ಮಿಕ ಪುರಾವೆಗಳು ಹೊರಬರುತ್ತಲೇ ಇವೆ. ದಕ್ಷಿಣ ಆಫ್ರಿಕಾದ ಸುದ್ವಾರ ಗುಹೆಯಲ್ಲಿ ಸುಮಾರು 6 ಸಾವಿರ ವರ್ಷಗಳಷ್ಟು ಹಳೆಯದಾದ ಶಿವಲಿಂಗ ಪತ್ತೆಯಾಗಿದೆ” ಎಂದು ಬರೆಯಲಾಗಿದೆ.

ಅದನ್ನು ಸತ್ಯವೆಂದು ನಂಬಿರುವ ಹಲವರು ಆ ವಿಡಿಯೋವನ್ನು ಫೇಸ್​ಬುಕ್, ವಾಟ್ಸಾಪ್‌ ಹಾಗೂ ಎಕ್ಸ್ ಸೇರಿದಂತೆ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಸತ್ಯವೇನು? ಪರಿಶೀಲಿಸೋಣ;

ವೈರಲ್ ಆದ ವಿಡಿಯೋ ಬಗ್ಗೆ ಟಿವಿ9 ಸತ್ಯಶೋಧ ನಡೆಸಿದೆ. ದಕ್ಷಿಣ ಆಫ್ರಿಕಾದ ಇಂಪುಮಲಂಗಾ ಪ್ರಾಂತ್ಯದಲ್ಲಿ ಸುದ್ವಾರ ಎಂಬ ಗುಹೆಗಳು ಇವೆ. ಆದರೆ, ಸುದ್ವಾರ ಗುಹೆಯೂ ಸೇರಿದಂತೆ ದಕ್ಷಿಣ ಆಫ್ರಿಕಾದಲ್ಲಿ ಯಾವುದೇ ಶಿವಲಿಂಗವೂ ಪತ್ತೆಯಾಗಿಲ್ಲ ಎಂದು ಕಂಡುಹಿಡಿದಿದೆ.

ಸುದ್ವಾರ ಗುಹೆಗಳಲ್ಲಿ 6,000 ವರ್ಷಗಳಷ್ಟು ಹಳೆಯ ಶಿವಲಿಂಗ ಪತ್ತೆಯಾಗಿರುವ ಬಗ್ಗೆ ಪುರಾತತ್ತ್ವಜ್ಞರು ತಿಳಿಸಿದ್ದಾರೆಯೇ, ಅಥವಾ ಪ್ರತಿಕ್ರಿಯಿಸಿದ್ದಾರೆಯೇ ಎಂದು ಹುಡುಕಲಾಗಿದೆ. ಆದರೆ, ಯಾವುದೇ ಪುರಾತತ್ತ್ವಜ್ಞರು ಶಿವಲಿಂಗ ಪತ್ತೆಯಾದ ಬಗ್ಗೆ ಮಾತನಾಡಿಲ್ಲ. ಸುದ್ವಾರದಲ್ಲಿ ಶಿವಲಿಂಗ ಪತ್ತೆಯಾಗಿರುವ ಬಗ್ಗೆ ಯಾವ ವಿಶ್ವಾಸಾರ್ಹ ಮೂಲಗಳೂ ಸುದ್ದಿ ಪ್ರಕಟಿಸಿಲ್ಲ. ವರದಿ ಮಾಡಿಲ್ಲ.

ಸುದ್ವಾರ ಗುಹೆಗಳಿಂದ ಸುಮಾರು 35-40 ಕಿ.ಮೀ ದೂರದಲ್ಲಿರುವ ನೆಲ್ಸ್‌ಪ್ರೂಟ್ ನೇಚರ್ ರಿಸರ್ವ್ ಪ್ರದೇಶದಲ್ಲಿ ಬಂಡೆಯ ರಚನೆಯನ್ನು ಶಿವಲಿಂಗವೆಂದು ಪರಿಗಣಿಸಲಾಗಿತ್ತು. ಇದನ್ನು, ನೂರಾರು ವರ್ಷಗಳ ಹಿಂದೆ ಆಫ್ರಿಕಾದಲ್ಲಿದ್ದ ಭಾರತೀಯರು ಪೂಜಿಸುತ್ತಿದ್ದರು ಎಂದು ನಂಬಲಾಗಿದೆ. ಆದರೆ, 6,000 ವರ್ಷಗಳಷ್ಟು ಹಳೆಯದಾದ ಯಾವುದೇ ಶಿವಲಿಂಗ ಪತ್ತೆಯಾಗಿಲ್ಲ ಎಂಬುದು ಖಚಿತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...