ಸ್ವಂತ ಗುರುತಿನ ಮೇಲೆ ಭೂಮಿ ಖರೀದಿಸಿದ ದೇಶದ ಮೊದಲ ಲಿಂಗತ್ವ ಅಲ್ಪಸಂಖ್ಯಾತ

Date:

ಕೇರಳದ ತ್ರಿಶೂರ್‌ನ ಚಾವಕ್ಕಾಡ್‌ನಲ್ಲಿ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಣ್ಣ ತುಂಡು ಭೂಮಿಯನ್ನು ನೋಂದಾಯಿಸಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತ (ಟಿಜಿ) ಗುರುತಿನ ಅಡಿಯಲ್ಲಿ ಭೂಮಿ ನೋಂದಣಿ ಮಾಡಿಕೊಂಡ ದೇಶದ ಮೊದಲಿಗರಾಗಿದ್ದಾರೆ.

38 ವರ್ಷ ವರ್ಷದ ಲೈಂಗಿಕ ಅಲ್ಪಸಂಖ್ಯಾತರಾದ ಫೈಸಲ್ ಫೈಸು ಅವರು ತಮ್ಮ ಸ್ವಂತ ಲಿಂಗತ್ವದ ಗುರುತಿನ ಅಡಿಯಲ್ಲಿ ತಾವು ಕೊಂಡುಕೊಂಡ ಭೂಮಿಯನ್ನು ನೋಂದಾಯಿಸಬೇಕಾದರೆ ಸಮುದಾಯದ ಇತರ ಸದಸ್ಯರು ಎದುರಿಸುತ್ತಿರುವ ಹಲವು ತೊಂದರೆಗಳನ್ನು ಇವರು ಎದುರಿಸಬೇಕಾಯಿತು.

ಏಕೆಂದರೆ ಆನ್‌ಲೈನ್‌ ವ್ಯವಸ್ಥೆಯ ಲಿಂಗದ ವಿಭಾಗದಲ್ಲಿ ‘ಪುರುಷ’ ಅಥವಾ ‘ಮಹಿಳೆ’ ಎಂದು ನಮೂದಿಸಲು ಮಾತ್ರ ನಿಬಂಧನೆಗಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೈಸು ಅವರು ತಾವು ಕೊಂಡುಕೊಳ್ಳುವ ಭೂಮಿಯನ್ನು ಕಾನೂನುಬದ್ಧವಾಗಿ ನೋಂದಾಯಿಸಿಕೊಳ್ಳಲು ಬಯಸಿದ್ದರು. ಅದೇ ಸಮಯದಲ್ಲಿ, ಲೈಂಗಿಕ ಅಲ್ಪಸಂಖ್ಯಾತ ಗುರುತನ್ನು ಉಳಿಸಿಕೊಳ್ಳಲು ಬಯಸಿದ್ದರು. ಮೇಲಾಗಿ, ಆಧಾರ್ ಕಾರ್ಡ್ ಸೇರಿದಂತೆ ಇತರ ಎಲ್ಲ ದಾಖಲೆಗಳಲ್ಲಿ “ಟಿಜಿ”(ಲಿಂಗತ್ವ ಅಲ್ಪಸಂಖ್ಯಾತ) ಲಿಂಗದ ಗುರುತನ್ನು ಇವರು ಹೊಂದಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಫೈಸು ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಕೊಂಡೊಯ್ದರು. ಮೂರು ವಾರಗಳಲ್ಲಿ ‘ಟಿಜಿ’ ಲಿಂಗವನ್ನು ನಮೂದಿಸುವ ಕಾನೂನು ಇರುವುದಾಗಿ ಅವರಿಗೆ ಮನವರಿಕೆ ಮಾಡಿದರು.

ಅಂತಿಮವಾಗಿ, ಫೈಸು ಅವರ ಆಶಯದಂತೆ ಚಾವಕ್ಕಾಡ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸುಮಾರು ಐದು ಸೆಂಟ್ಸ್ ಜಮೀನನ್ನು ನೋಂದಾಯಿಸಿಕೊಂಡರು.

“ಟಿಜಿ ಸಮುದಾಯದ ವ್ಯಕ್ತಿಯೊಬ್ಬರು ‘ಟಿಜಿ’ ಗುರುತನ್ನು ನಮೂದಿಸುವ ಮೂಲಕ ಭೂಮಿಯನ್ನು ನೋಂದಣಿ ಮಾಡಿಸಿಕೊಂಡಿರುವುದು ದೇಶದಲ್ಲಿ ಇದೇ ಮೊದಲಾಗಿದೆ. ಈ ಹಿಂದೆ ಕೇರಳ ಸರ್ಕಾರದ ‘ಲೈಫ್ ಮಿಷನ್ ಯೋಜನೆಯಡಿ’ಯಲ್ಲಿ ಮನೆ ಮಂಜೂರು ಮಾಡಿದ ಟಿಜಿ ಸಮುದಾಯದ ಸದಸ್ಯರು ಹಲವು ತೊಂದರೆಗಳಿಂದಾಗಿ ನೋಂದಣಿ ಸಮಯದಲ್ಲಿ ಲಿಂಗವನ್ನು ‘ಪುರುಷ’ ಎಂದು ನಮೂದಿಸಬೇಕಾಗಿತ್ತು” ಎಂದು ಫೈಸು ತಿಳಿಸುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...