ಹೃದಯ ಶಸ್ತ್ರಚಿಕಿತ್ಸೆ ಮಾಡಿದ ನಕಲಿ ‘ಬ್ರಿಟಿಷ್’ ವೈದ್ಯ; ಏಳು ಮಂದಿ ಸಾವು

Date:

ಮಧ್ಯಪ್ರದೇಶದ ದಾಮೋಹ್ ನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ‘ಬ್ರಿಟಿಷ್’ ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದ್ದು, ಈವರೆಗೆ ಏಳು ಮಂದಿ ಈ ನಕಲಿ ವೈದ್ಯನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಆಸ್ಪತ್ರೆಯಲ್ಲಿ ಒಂದೇ ತಿಂಗಳಲ್ಲಿ ಏಳು ಮಂದಿ ಸಾವಪ್ಪುತ್ತಿದ್ದಂತೆ ಸ್ಥಳೀಯವಾಗಿ ಆತಂಕ ಸೃಷ್ಟಿಯಾಗಿತ್ತು. ಅದಾದ ಬಳಿಕ ಎನ್ ಜಾನ್ ಕೆಮ್ ಎಂಬ ವ್ಯಕ್ತಿ ಕ್ರಿಶ್ಚಿಯನ್ ಮಿಷನರಿ ಆಸ್ಪತ್ರೆಯಲ್ಲಿ ಅದೇ ಹೆಸರಿನ ಪ್ರಸಿದ್ಧ ಬ್ರಿಟಿಷ್ ವೈದ್ಯರಂತೆ ನಟಿಸಿ ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ಆರೋಪಿಸಲಾಗಿತ್ತು.

ಇದನ್ನು ಓದಿದ್ದೀರಾ? ಬೀದರ್‌ | ನಕಲಿ ವೈದ್ಯರ ಕ್ಲಿನಿಕ್, ಲ್ಯಾಬ್ ಮೇಲೆ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾನು ಹೃದ್ರೋಗ ತಜ್ಞ ಎಂದು ಹೇಳಿಕೊಂಡಿದ್ದ ನಕಲಿ ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆಗಳನ್ನೂ ಮಾಡಿದ್ದನು. ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯ ನಂತರ ಆರೋಪಿಯ ನಿಜವಾದ ಹೆಸರು ನರೇಂದ್ರ ವಿಕ್ರಮಾದಿತ್ಯ ಯಾದವ್ ಎಂದು ತಿಳಿದುಬಂದಿದೆ.

ಇನ್ನು ಮಕ್ಕಳ ಕಲ್ಯಾಣ ಸಮಿತಿಯ ವಕೀಲ ಮತ್ತು ಜಿಲ್ಲಾ ಅಧ್ಯಕ್ಷ ದೀಪಕ್ ತಿವಾರಿ, ಈವರೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅಧಿಕೃತ ಸಾವಿನ ಸಂಖ್ಯೆ 7 ಆಗಿದೆ. ಆದರೂ ನೈಜ ಸಾವಿನ ಸಂಖ್ಯೆ ಇನ್ನೂ ಅಧಿಕವಾಗಿದೆ ಎಂದಿದ್ದಾರೆ. ದೀಪಕ್ ತಿವಾರಿ ಅವರು ಈ ಹಿಂದೆ ದಾಮೋಹ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ದೂರು ನೀಡಿದ್ದರು.

ಇದನ್ನು ಓದಿದ್ದೀರಾ? ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು

“ನಾವು ಈ ಹೆಸರಿನ ನಿಜವಾದ ಬ್ರಿಟಿಷ್ ವೈದ್ಯರ ಬಗ್ಗೆ ಪರಶೀಲನೆ ನಡೆಸಿದಾಗ ಅವರು ಈಗಲೂ ಬ್ರಿಟನ್‌ನಲ್ಲಿಯೇ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ಈ ವ್ಯಕ್ತಿಯ ಹೆಸರು ನರೇಂದ್ರ ಯಾದವ್. ಈ ಹಿಂದೆ ಹೈದರಾಬಾದ್‌ನಲ್ಲಿದ್ದ ಈತನ ಮೇಲೆ ಅಲ್ಲಿ ಪ್ರಕರಣಗಳು ದಾಖಲಾಗಿವೆ. ಎಲ್ಲಿಯೂ ಆತ ತನ್ನ ನಿಜವಾದ ಹೆಸರು, ದಾಖಲೆಗಳನ್ನು ತೋರಿಸಿಲ್ಲ” ಎಂದು ಮಾಧ್ಯಮಕ್ಕೆ ತಿವಾರಿ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಪ್ರಿಯಾಂಕ್ ಕನೂಂಗೊ, ಮಿಷನರಿ ಆಸ್ಪತ್ರೆಯು ಆಯುಷ್ಮಾನ್ ಭಾರತ್ ಯೋಜನೆಯಡಿ ಸರ್ಕಾರದಿಂದ ಹಣವನ್ನು ಪಡೆಯುತ್ತಿದೆ. ಈ ಮಿಷನರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ನಕಲಿ ವೈದ್ಯ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂಬ ದೂರು ನಮಗೆ ಬಂದಿದೆ. ಇದು ಗಂಭೀರ ಆರೋಪ. ಪ್ರಸ್ತುತ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...