ನಟ ಅನುಪಮ್ ಖೇರ್‌ ಚಿತ್ರವಿರುವ ನಕಲಿ ನೋಟುಗಳ ಹಾವಳಿ

Date:

ಪ್ರಧಾನಿ ಮೋದಿ ಅವರು ಕಪ್ಪು ಹಣ ಹೊರತರುತ್ತೇವೆ. ನಕಲಿ ನೋಟುಗಳ ಹಾವಳಿಗೆ ಬ್ರೇಕ್‌ ಹಾಕಿ, ಖೋಟಾ ನೋಟುಗಳು ಇಲ್ಲದಂತೆ ಮಾಡುತ್ತೇವೆಂದು ಹೇಳಿಕೊಂಡು ನೋಟು ಅಮಾನ್ಯೀಕರಣ ಮಾಡಿದ್ದರು. ಮುಂದುವರೆದು ಕೆಲವು ಮಾಧ್ಯಮಗಳು ಮೋದಿ ಹೊಸದಾಗಿ ತರುತ್ತಿರುವ ನೋಟುಗಳನ್ನು ನಕಲಿ ಮಾಡಲು ಸಾಧ್ಯವೇ ಇಲ್ಲ ಎಂದು ಭಾರೀ ಪ್ರಚಾರ ಕೊಟ್ಟಿದ್ದರು. ಆದರೆ, ಇಂದಿಗೂ ನಕಲಿ ನೋಟುಗಳ ಹಾವಳಿ ಮುಂದುವರೆದಿದೆ.

ವಿಷಾಧನೀಯ ಸಂಗತಿ ಅಂದ್ರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿಯೇ ನಕಲಿ ನೋಟುಗಳ ಹಾವಳಿ ಹೆಚ್ಚಳವಾಗಿದೆ. ನಟ ಅನುಪಮ್‌ ಖೇರ್‌ ಅವರ ಭಾವಚಿತ್ರವಿರುವ 500 ರೂ. ಮುಖಬೆಲೆಯ ಖೋಟಾ ನೋಟುಗಳು ಗುಜರಾತ್‌ನಲ್ಲಿ ಹರಿದಾಡುತ್ತಿವೆ. ನಕಲಿ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಬದಲಾಗಿ ನಟ ಅನುಪಮ್ ಖೇರ್ ಅವರ ಫೋಟೋ ಇರುವುದೂ ಅಚ್ಚರಿ ಮೂಡಿಸಿದೆ. ಈ ಖೋಟಾ ನೋಟುಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗುತ್ತಿವೆ.

ನಮ್ಮ ಕರೆನ್ಸಿ ನೋಟುಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರವಿದೆ. ಆದರೂ, ಈ ಖೋಟಾ ನೋಟುಗಳಲ್ಲಿ ಅನುಪಮ್ ಅವರ ಚಿತ್ರಗಳು ಕಾಣಿಸಿಕೊಂಡಿವೆ. ವಂಚಕರು ಬರೋಬ್ಬರಿ 2,100 ಗ್ರಾಂ ಚಿನ್ನವನ್ನು ಖರೀದಿ ಮಾಡಲು ₹1.60 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಅಂಗಡಿಗೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಮಾಣಿಕ್ ಚೌಕ್ ಪ್ರದೇಶದಲ್ಲಿರುವ ಮೆಹುಲ್ ಠಕ್ಕರ್ ಎಂಬವರ ಚಿನ್ನದ ಅಂಗಿಡಗೆ ಬಂದಿದ್ದ ಇಬ್ಬರು ವಂಚಕರು, 2 ಕೆ.ಜಿ ಚಿನ್ನವನ್ನು ₹1.6 ಕೋಟಿಗೆ ಖರೀದಿ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದರು. ಆ ಪೈಕಿ, ಮೊದಲ ಕಂತಿನಲ್ಲಿ ₹1.30 ಕೋಟಿ ಹಾಗೂ ಎರಡನೇ ಕಂತಿನಲ್ಲಿ 30 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದರು.

ಒಪ್ಪಂದದಂತೆ,ವಂಚಕರು ಠಕ್ಕರ್‌ ಅವರಿಗೆ ಹಣ ನೀಡಿದ್ದು, ಅದರಲ್ಲಿ ಅನುಪಮ್ ಖೇರ್ ಅವರ ಫೋಟೋಗಳಿರುವ ₹500 ಮುಖಬೆಲೆಯ ನಕಲಿ ನೋಟುಗಳನ್ನು ಕಳಗಡೆ ಇಟ್ಟು, ಮೇಲ್ಬಾಗದಲ್ಲಿ ಅಸಲಿ ನೋಟುಗಳನ್ನು ಇಟ್ಟಿದ್ದರು. ಆ ನಕಲಿ ನೋಟುಗಳ ಮೊತ್ತ ₹1.3 ಕೋಟಿ ಎಂದು ತಿಳಿದುಬಂದಿದೆ. ಅಲ್ಲದೆ, ನೋಟುಗಳನ್ನು ಪೂರ್ತಿ ಎಣಿಸುವ ಮುನ್ನವೇ ಅಂಗಡಿಯಿಂದ ಕಾಲ್ಕಿತ್ತಿದ್ದಾರೆ.

ಇನ್ನು, ಮೆಹುಲ್ ಠಕ್ಕರ್ ಅವರು ತನ್ನ ಉದ್ಯೋಗಿ ಭರತ್ ಜೋಶಿಗೆ ನೋಟುಗಳ ಬಂಡಲ್‌ಅನ್ನು ಎಣಿಸಲು ಕೊಟ್ಟಿದ್ದಾರೆ. ಆ ನೋಟುಗಳನ್ನು ಯಂತ್ರದ ಸಹಾಯದಿಂದ ಎಣಿಸುವಾಗ ಅದರಲ್ಲಿ ನಕಲಿ ನೋಟುಗಳಿವೆ ಎಂಬುದು ಗೊತ್ತಾಗಿದೆ.

ನಕಲಿ ನೋಟುಗಳನ್ನು ಕಂಡ ಮೆಹುಲ್ ಠಕ್ಕರ್ ಮತ್ತು ಭರತ್ ಜೋಶಿ ಅಹಮದಾಬಾದ್‌ನ ನವರಂಗ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೆಹುಲ್ ಠಕ್ಕರ್ ಅವರ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಪೊಲೀಸರು ಇಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ. ಆರೋಪಿಗಳನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...