ದೆಹಲಿ-ವಡೋದರಾ ವಿಮಾನದಲ್ಲಿ ‘ಬಾಂಬ್’ ಇರುವುದಾಗಿ ನಕಲಿ ಪತ್ರ; ಕೆಲ ಕ್ಷಣ ಆತಂಕ

Date:

ದೆಹಲಿ-ವಡೋದರಾ ನಡುವೆ ಸಂಚರಿಸುವ ಏರ್ ಇಂಡಿಯಾ ವಿಮಾನದ ವಾಶ್‌ರೂಮ್‌ನಲ್ಲಿ ‘ಬಾಂಬ್‌’ ಇದೆ ಎಂದು ಬರೆಯಲಾಗಿದ್ದ ಟಿಶ್ಯೂ ಪೇಪರ್ ಪತ್ತೆಯಾಗಿದ್ದು, ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಭಯ-ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಸಂಜೆ ಆ ಪೇಪರ್ ಪತ್ತೆಯಾದ ಬಳಿಕ, ವಿಮಾನದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ, ಅನುಮಾನಾಸ್ಪದವಾದ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಅದೊಂದು ನಕಲಿ ಸಂದೇಶ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ವಿಮಾನ ಸಿಬ್ಬಂದಿಗೆ ಸಂಜೆ 7 ಗಂಟೆ ಸುಮಾರಿನಲ್ಲಿ ‘ಬಾಂಬ್‌’ ಬಗ್ಗೆ ಬರೆಯಲಾಗಿದ್ದ ಟಿಶ್ಯೂ ಪೇಪರ್ ಸಿಕ್ಕಿದೆ. ಕೂಡಲೇ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ, ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ. ಆದರೆ, ಸಂಶಯಾಸ್ಪದವಾಗಿ ಏನೂ ಕಂಡುಬಂದಿಲ್ಲ. ನಂತರ, ಪ್ರಯಾಣಿಕರು ಮತ್ತೊಂದು ವಿಮಾನದಲ್ಲಿ ವಡೋದರಾಗೆ ಪ್ರಮಾಣ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...