ರೂಪಾಯಿ ಮೌಲ್ಯ ಕುಸಿತ ದೇಶದ ನಿಜವಾದ ಆರ್ಥಿಕ ಸ್ಥಿತಿ ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

Date:

‘ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು ದಾಖಲೆ ಮಟ್ಟಕ್ಕೆ ಕುಸಿದಿರುವುದು ದೇಶದ ನಿಜವಾದ ಆರ್ಥಿಕ ಪರಿಸ್ಥಿತಿಯನ್ನು ತೋರಿಸುತ್ತದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್‌ ಎದುರು ಬುಧವಾರ ₹90.15ಕ್ಕೆ ಕುಸಿದಿತ್ತು. ಗುರುವಾರದ ಆರಂಭಿಕ ವಹಿವಾಟಿನಲ್ಲೂ ಅಮೆರಿಕದ ಡಾಲರ್ ಎದುರು ರೂಪಾಮಿ ಮೌಲ್ಯ ಮತ್ತಷ್ಟು 28 ಪೈಸೆ ಕುಸಿತ ಕಂಡು ಸಾರ್ವಕಾಲಿಕ ಕನಿಷ್ಠ ಮೊತ್ತವಾದ ₹90.43ಕ್ಕೆ ತಲುಪಿದೆ.

ಈ ಸಂಬಂಧ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ರೂಪಾಯಿ ಮೌಲ್ಯ ಕುಸಿತ ಕಂಡಿದ್ದಾಗ ಸ್ವತಃ ಮೋದಿ ಅವರೇ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು ಎಂದು ಖರ್ಗೆ ನೆನಪಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ‘ದೇವರ’ ದಾಖಲೆ ಮುರಿದು ಮುನ್ನುಗ್ಗುತ್ತಿರುವ ಕೊಹ್ಲಿ

‘ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ. ಇದು ದೇಶದ ನಿಜವಾದ ಆರ್ಥಿಕ ಸ್ಥಿತಿಯನ್ನು ತೋರಿಸುತ್ತದೆ. ಒಂದು ವೇಳೆ ಮೋದಿ ಸರ್ಕಾರದ ನೀತಿಗಳು ಸರಿಯಾಗಿದ್ದರೆ ರೂಪಾಯಿ ಇಷ್ಟೊಂದು ಕುಸಿಯುತ್ತಿರಲಿಲ್ಲ’ ಎಂದು ಖರ್ಗೆ ಹೇಳಿದ್ದಾರೆ.

‘2014ರಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿದೆ. ನೀವು ಇದಕ್ಕೆ ಉತ್ತರಿಸಲೇಬೇಕು ಎಂದು ಸರ್ಕಾರವನ್ನು ಮೋದಿ ಪ್ರಶ್ನಿಸಿದ್ದರು. ನಾವು ಈಗ ಅದೇ ಪ್ರಶ್ನೆಯನ್ನು ಪ್ರಧಾನಿ ಅವರನ್ನು ಕೇಳುತ್ತಿದ್ದೇವೆ’ ಎಂದು ಹೇಳಿದ್ದಾರೆ.

‘ದೇಶವು ಅಭಿವೃದ್ಧಿ ಸಾಧಿಸುತ್ತಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ ಎಂದು ಸರ್ಕಾರವು ಹೇಳಿಕೊಳ್ಳುತ್ತಿದೆ. ಆದರೆ ರೂಪಾಯಿ ಮೌಲ್ಯ ಕುಸಿದಾಗ ದೇಶದ ನಿಜವಾದ ಆರ್ಥಿಕ ಸ್ಥಿತಿ ಬಯಲಾಗುತ್ತಿದೆ’ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...