ಫರಿದಾಬಾದ್ ದುರಂತ: ಮನೆಯ ಸೂರು ಕುಸಿದು ಮೂವರು ಮಕ್ಕಳ ಸಾವು

Date:

ಶಿಥಿಲಗೊಂಡಿದ್ದ ಮನೆಯ ಸೂರು ಕುಸಿದು ಒಂದೇ ಮನೆಯ ಮೂವರು ಮಕ್ಕಳ ಸಾವನ್ನಪ್ಪಿರುವ ಘಟನೆ ಫರಿದಾಬಾದ್‌ನ ಸಿಕ್ರಿ ಗ್ರಾಮದಲ್ಲಿ ಶನಿವಾರ ನಡೆದಿದ್ದು, ಈ ಫರಿದಾಬಾದ್ ದುರಂತದಲ್ಲಿ ಸಾವನ್ನಪ್ಪಿದ ಮೂವರು ಮಕ್ಕಳು ಸಹೋದರರು ಎಂದು ವರದಿಯಾಗಿದೆ.

ಮೃತರನ್ನು ಆಕಾಶ್ (10), ಮುಸ್ಕಾನ್ (8) ಮತ್ತು ಆದಿಲ್ (6) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಈ ಸೋರುಗಳು ಉತ್ತಮ ಸ್ಥಿತಿಯಲ್ಲಿರಲಿಲ್ಲ. ಈ ಪ್ರದೇಶದಲ್ಲಿ ಮಳೆಯ ನಂತರ ಕಾಂಕ್ರೀಟ್ ಚಪ್ಪಡಿ ಕುಸಿದಿದೆ. ಶುಕ್ರವಾರ ಸಂಜೆ ಮೂವರು ಒಡಹುಟ್ಟಿದವರು ಈ ಸೂರಿನಡಿಯಲ್ಲಿ ಕುಳಿತಿದ್ದರು.

ಮನೆ ಶಿಥಿಲಾವಸ್ಥೆಯಲ್ಲಿದೆ ಎಂದು ತಿಳಿದ ನಂತರವೂ ಬಾಡಿಗೆಗೆ ನೀಡಿದ ಮನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಆತನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಫರಿದಾಬಾದ್| ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ; ಐವರ ಬಂಧನ

ಸ್ಥಳೀಯ ನಿವಾಸಿಗಳು ಬಿದ್ದ ಸೂರನ್ನು ತೆಗೆದು ಅದರಡಿಯಲ್ಲಿ ಸಿಲುಕಿದ್ದ ಪ್ರಜ್ಞಾಹೀನ ಮಕ್ಕಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಮೂವರೂ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.

ಈ ಮೂವರು ಮಕ್ಕಳ ತಂದೆ ಧರ್ಮೇಂದ್ರ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105 (ಅಪರಾಧೀಯ ನರಹತ್ಯೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಸೆಕ್ಟರ್ 58 ಪೊಲೀಸ್ ಠಾಣೆಯ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಕ್ರಿಶನ್ ಕುಮಾರ್ ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...