ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ; ನನ್ನನ್ನು ಮೇಲೆತ್ತಲು ಸರ್ಕಾರಕ್ಕೆ ಬಿಡಬೇಡಿ: 29 ದಿನಗಳಿಂದ ಉಪವಾಸ ಮಾಡುತ್ತಿರುವ ರೈತ ದಲೈವಾಲ್

Date:

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಗೆ ಆಗ್ರಹಿಸಿ ಪಂಜಾಬ್‌ನ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ್ ಅವರು ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಆದರೂ, ಕೇಂದ್ರ ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಲಾಗಿದೆ. “ನಾನು ನನ್ನ ಹೋರಾಟದಲ್ಲಿ ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ. ನನ್ನನ್ನು ಬಲವಂತವಾಗಿ ಮೇಲೆತ್ತಲು ಸರ್ಕಾರಕ್ಕೆ ಬಿಡಬೇಡಿ” ಎಂದು ಅವರು ಹೇಳಿದ್ದಾರೆ.

ಪಂಜಾಬ್‌ನ ಖಾನೌರಿ-ಶಂಭು ಗಡಿಯಲ್ಲಿ ರೈತರು ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಹೋರಾಟದ ಸ್ಥಳದಲ್ಲಿಯೇ ದಲೈವಾಲ್ ಅವರು 29 ದಿನಗಳಿಂದ ಉಪವಾಸ ನಡೆಸುತ್ತಿದ್ದಾರೆ. “ನಾನು ಚೆನ್ನಾಗಿದ್ದೇನೆ. ಆದರೆ, ನಾವು ಈ ಹೋರಾಟದ ಯುದ್ಧವನ್ನು ಗೆಲ್ಲಬೇಕು. ಇಡೀ ದೇಶವು ಒಗ್ಗೂಡಿದರೆ ಮಾತ್ರ ಈ ಹೋರಾಟವನ್ನು ಗೆಲ್ಲಲು ಸಾಧ್ಯ. ರೈತರು 2021ರ ಪ್ರತಿಭಟನೆಯನ್ನು ಅಪೂರ್ಣಗೊಳಿಸಿದ್ದಾರೆ. ಅದನ್ನು ಪೂರ್ಣಗೊಳಿಸಬೇಕು. ಎಂಎಸ್‌ಪಿ ಪಡೆಯಬೇಕು. ನನ್ನನ್ನು ಬಲವಂತವಾಗಿ ಇಲ್ಲಿಂದ ತೆರವುಗೊಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಡಿ” ಎಂದು ಹೇಳಿದ್ದಾರೆ.

ಸುಮಾರು ಒಂದು ತಿಂಗಳಿನಿಂದ ಏನನ್ನೂ ತಿನ್ನದೇ ಪ್ರತಿಭಟನೆ ನಡೆಸುತ್ತಿರುವ ದಲೈವಾಲ್ ಅವರ ದೇಹದಲ್ಲಿ ಕೀಟೋನ್ ಮಟ್ಟ ಅಪಾಯಕಾರಿಯಾಗಿ ಹೆಚ್ಚಾಗಿವೆ. ಅವರು ಹೃದಯಸ್ತಂಭನ ಅಥವಾ ಅಂಗಾಂಗ ವೈಫಲ್ಯಕ್ಕೆ ಒಳಗಾಗುವ ಅಪಾಯದಲ್ಲಿದ್ದಾರೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಆದಾಗ್ಯೂ, ಉಪವಾಸವನ್ನು ನಿಲ್ಲಿಸದ ದಲೈವಾಲ್ ಪ್ರತಿಭಟನೆ ಮುಂದುವರೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಟ್ವೀಟ್‌ನಲ್ಲಿ ತಮ್ಮ ಹೋರಾಟವನ್ನು ಸ್ಥಗಿತಗೊಳಿಸುವಂತೆ ದಲೈವಾಲ್ ಅವರಲ್ಲಿ ಮನವಿ ಮಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಲು ಸಾಧ್ಯವಾದರೆ, ಕೇವಲ 200 ಕಿಮೀ ದೂರದಲ್ಲಿ ಕುಳಿತಿರುವ ಅನ್ನದಾತರೊಂದಿಗೆ ಏಕೆ ಮಾತುಕತೆ ನಡೆಸಲು ಸಾಧ್ಯವಿಲ್ಲ? ಸರ್ಕಾರದ ಪ್ರತಿಕ್ರಿಯೆ ಮತ್ತು ಕ್ರಮಕ್ಕಾಗಿ ಉಪವಾಸನಿರತ ರೈತರು ಕಾಯುತ್ತಿದ್ದಾರೆ” ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...