ರೈತ ಹೋರಾಟ | ಜನವರಿ 21ರಿಂದ ದೆಹಲಿ ಚಲೋ ಪುನರಾರಂಭ: ರೈತ ಸಂಘಟನೆಗಳ ಘೋಷಣೆ

Date:

ಉಪವಾಸನಿರತ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರೊಂದಿಗೆ 111 ರೈತರು ಹರಿಯಾಣದ ಖಾನೌರಿ ಗಡಿಯಲ್ಲಿ ಆಮರಣಾಂತ ಉಪವಾಸ ಆರಂಭಿಸಿದ್ದಾರೆ. ಈ ಬೆನ್ನಲ್ಲೇ, ಜನವರಿ 21ರಂದು ಪಂಜಾಬ್‌-ಹರಿಯಾಣ ನಡುವಿನ ಶಂಭು ಗಡಿಯಿಂದ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಕಾನೂನುಬದ್ದವಾಗಿ ಜಾರಿಗೆ ತರಬೇಕೆಂದು ಆಗ್ರಹಿಸಿ ರೈತರು ಶಂಭು ಮತ್ತು ಖನೌರಿ ಗಡಿಗಳಲ್ಲಿ ಹಲವರು ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರದ ವಿರುದ್ಧ ದಲ್ಲೇವಾಲ್ ಅವರು 52 ದಿನಗಳಿಂದ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಇದೀಗ, ಕೇಂದ್ರವು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಒತ್ತಡ ಹೇರಲು ದೆಹಲಿ ಚಲೋ ಪ್ರತಿಭಟನೆಯನ್ನು ಪುನರಾರಂಭಿಸಲು ರೈತರು ಮುಂದಾಗಿದ್ದಾರೆ.

“ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ)ಸಂಘಟನೆಗಳ ನೇತೃತ್ವದಲ್ಲಿ ಜನವರಿ 21 ರಂದು ಶಂಭು ಗಡಿಯಿಂದ ದೆಹಲಿಗೆ ಪಾದಯಾತ್ರೆಯನ್ನು ಪುನರಾರಂಭಿಸುತ್ತೇವೆ. ಸರ್ಕಾರಕ್ಕೆ ರೈತರೊಂದಿಗೆ ಮಾತುಕತೆ ನಡೆಸಲು ಇಷ್ಟವಿಲ್ಲ ಎಂಬುದು ಕಾಣಿಸುತ್ತಿದೆ. ಆದ್ದರಿಂದ, ನಾವು ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದೇವೆ” ಎಂದು ರೈತ ನಾಯಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲ್ಲೇವಾಲ್ ಅವರ ಆರೋಗ್ಯ ಹದಗೆಡುತ್ತಿರುವ ಬಗ್ಗೆ ರೈತ ಹೋರಾಟಗಾರರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅವರ ದೀರ್ಘಕಾಲದ ಉಪವಾಸವು ‘ಬಹು ಅಂಗಾಂಗ ವೈಫಲ್ಯ’ಕ್ಕೆ ಕಾರಣವಾಗಬಹುದು. ಸರ್ಕಾರ ದಲ್ಲೇವಾಲ್ ಹೋರಾಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...