ಹರಿಯಾಣ ಚುನಾವಣೆ | ಯಾವುದೇ ಪಕ್ಷಕ್ಕೂ ಬೆಂಬಲ ನೀಡದಿರಲು ರೈತರ ನಿರ್ಧಾರ: ಮಹಾಪಂಚಾಯತ್

Date:

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಅಥವಾ ವಿರೋಧಿಸದಿರಲು ಜಿಂದ್ ಜಿಲ್ಲೆಯ ಉಚ್ಚಾನಾದಲ್ಲಿ ಭಾನುವಾರ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ನೌಜವಾನ್ ಒಕ್ಕೂಟದ ಆಶ್ರಯದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಹರಿಯಾಣ, ಪಂಜಾಬ್ ಮತ್ತು ಇತರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ರೈತರು ಭಾಗವಹಿಸಿದ್ದರು. ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್, ಶ್ರವಣ್ ಸಿಂಗ್ ಪಂಧೇರ್, ಅಭಿಮನ್ಯು ಕೊಹಾಡ್ ಭಾಗವಹಿಸಿದ್ದರು.

ಮಹಾಪಂಚಾಯತ್‌ನಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ದಲ್ಲೆವಾಲ್, “ನಮಗೂ (ರೈತ ಚಳವಳಿ) ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಚಳವಳಿಯನ್ನು ಬಲಗೊಳಿಸುವುದು ನಮ್ಮ ಉದ್ದೇಶ. ಚುನಾವಣೆಯಲ್ಲಿ ನಾವು ಯಾರಿಗೂ ಸಹಾಯ ಮಾಡುವುದಿಲ್ಲ ಅಥವಾ ಯಾರನ್ನೂ ವಿರೋಧಿಸುವುದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಆಂದೋಲನವನ್ನು ಬಲಪಡಿಸುವ ನಿಟ್ಟಿನಲ್ಲಿ ನಾವು ಸರ್ಕಾರದ ವೈಫಲ್ಯಗಳು ಮತ್ತು ರೈತರ ವಿರುದ್ಧ ಕೈಗೊಂಡ ನಿರ್ಧಾರಗಳ ಬಗ್ಗೆ ಜನರಿಗೆ ಅರಿವು ಮೂಡಿಸುತ್ತೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | ನಾನೇ ಅತ್ಯಂತ ಹಿರಿಯ ಶಾಸಕ; ಬಿಜೆಪಿ ಗೆದ್ದರೆ ಸಿಎಂ ಹುದ್ದೆಗೆ ಹಕ್ಕು ಮಂಡನೆ: ಅನಿಲ್ ವಿಜ್

“ನಾವು ಯಾವ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದೇವೆಯೋ ಅದು ಬರೀ ಪಂಜಾಬ್, ಹರಿಯಾಣದ ರೈತರ ಬೇಡಿಕೆಯಲ್ಲ, ಇಡೀ ದೇಶದ ರೈತರ ಬೇಡಿಕೆಯಾಗಿದೆ. ಇಡೀ ದೇಶವನ್ನು ಈ ಆಂದೋಲನದೊಂದಿಗೆ ಸಂಪರ್ಕಿಸಲು ದೇಶದ ಮೂಲೆ ಮೂಲೆಗಳಲ್ಲಿ ಮಹಾಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ಮುಂದಿನ ಮಹಾಪಂಚಾಯತ್ ಸೆಪ್ಟೆಂಬರ್ 22ರಂದು ಕುರುಕ್ಷೇತ್ರದ ಪಿಪ್ಲಿಯಲ್ಲಿ ನಡೆಯಲಿದೆ” ಎಂದು ಮಾಹಿತಿ ನೀಡಿದರು.

ಇನ್ನು ರೈತರನ್ನು ತಡೆದ ವಿಚಾರದ ಬಗ್ಗೆ ಮಾತನಾಡಿದ ಅವರು, “ಕಿಸಾನ್ ಮಹಾಪಂಚಾಯತ್‌ಗೆ ರೈತರನ್ನು ಬರದಂತೆ ಸರ್ಕಾರ ತಡೆದ ರೀತಿ ತುಂಬಾ ನಾಚಿಕೆಗೇಡಿನದು, ಖಂಡನೀಯ. ರೈತರು ಜಮಾಯಿಸುವುದನ್ನು ತಡೆಯಲು ಹಲವೆಡೆ ಸಿಮೆಂಟ್ ತಡೆಗೋಡೆಗಳನ್ನು ಹಾಕಲಾಗಿದೆ. ರೈತರಿಗೆ ಆಹಾರ ನೀಡಬೇಡಿ ಎಂದು ಸರ್ಕಾರ ಗುರುದ್ವಾರದ ವ್ಯವಸ್ಥಾಪಕರಿಗೆ ಹೇಳಿದೆ” ಎಂದು ಆರೋಪಿಸಿದರು.

ರೈತ ಮುಖಂಡ ಅಭಿಮನ್ಯು ಕೋಹಾದ್ ಮಾತನಾಡಿ, “ಯಾವುದೇ ರಾಜಕೀಯ ಪಕ್ಷಕ್ಕೆ ಮತ ಹಾಕುವಂತೆ ನಾವು ಮನವಿ ಮಾಡುವುದಿಲ್ಲ. ಆದರೆ ನೀವು ಮತ ​​ಹಾಕಲು ಹೋದಾಗ ಕಳೆದ ಹತ್ತು ವರ್ಷಗಳಲ್ಲಿ ರೈತರು ಮತ್ತು ಕೂಲಿಕಾರರ ಮೇಲೆ ನಡೆದಿರುವ ದೌರ್ಜನ್ಯವನ್ನು ನೆನಪಿಸಿಕೊಳ್ಳಿ ಎಂದು ಖಂಡಿತಾ ಹೇಳುತ್ತೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...