ದೆಹಲಿ ಚಲೋ | ಇಂದು ಪುನಃ ಮೆರವಣಿಗೆ ಹೊರಡಲಿರುವ ರೈತರು

Date:

ಪಂಜಾಬ್‌ ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ನಿನ್ನೆ(ಫೆ.13) ಪೊಲೀಸರು ಬಲವಂತವಾಗಿ ತಡೆದ ನಂತರ ಒಂದು ದಿನದ ಮಟ್ಟಿಗೆ ತಾತ್ಕಾಲಿಕವಾಗಿ ವಿರಾಮ ಘೋಷಿಸಲಾಗಿತ್ತು. ಇಂದು ಮತ್ತೆ ದೆಹಲಿ ಚಲೋ ಪುನರಾರಂಭಗೊಂಡಿದೆ.

ನಿನ್ನೆ ಪಂಜಾಬ್‌ – ಹರಿಯಾಣದ ಶಂಭೂ ಗಡಿಯಲ್ಲಿ ಪೊಲೀಸರು ನಿರ್ಮಿಸಿದ್ದ ಬ್ಯಾರಿಕೇಡ್‌ಗಳನ್ನು ಭೇದಿಸಿ ಪ್ರತಿಭಟನಾನಿರತಾ ರೈತರು ದೆಹಲಿಯತ್ತ ಸಾಗಲು ನಿರ್ಧರಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ರೈತರ ಮೇಲೆ ಬಲವಂತವಾಗಿ ಅಶ್ರುವಾಯು, ಸ್ಮೋಕ್‌ ಬಾಂಬ್‌, ಜಲ ಪಿರಂಗಿಗಳನ್ನು ಬಳಸಿದರು.

ಪೊಲೀಸರು ನಡೆಸಿದ ಅಶ್ರುವಾಯು ಶೆಲ್‌ ಸಿಡಿತದಲ್ಲಿ 70ಕ್ಕೂ ಹೆಚ್ಚು ಮಂದಿ ರೈತರು ಗಾಯಗೊಂಡಿದ್ದಾರೆ. ಅಲ್ಲದೆ ಅಂಬಾಲಾ ಗಡಿಯಲ್ಲಿ ಕೆಲ ರೈತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ನಡುವೆ ತಾತ್ಕಾಲಿಕವಾಗಿ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ರೈತರು ಮಂಗಳವಾರ ಸಂಜೆ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನಿನ ಖಾತರಿ’ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಜಾರಿ: ಕಾಂಗ್ರೆಸ್

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನಿನ ಖಾತರಿ ಸೇರಿದಂತೆ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವುದಾಗಿ ಒಕ್ಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ತಿಳಿಸಿದೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ‘ಪಕ್ಷ ಕೈಗೊಂಡಿರುವ ಈ ನಿರ್ಧಾರದಿಂದ 15 ಕೋಟಿ ರೈತ ಕುಟುಂಬಗಳ ಅಭಿವೃದ್ಧಿಯಾಗಿ, ಅವರ ಜೀವನವೇ ಬದಲಾಗುವುದು. ರೈತರಿಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನೀಡುವ ಮೊದಲ ಗ್ಯಾರಂಟಿ ಇದು. ‘ಪ್ರತಿಭಟನೆ ನಡೆಸುತ್ತಿರುವ ರೈತ ರೊಂದಿಗೆ ನೇರವಾಗಿ ಮಾತುಕತೆ ನಡೆಸಿ, ಅವರಿಗೆ ನ್ಯಾಯ ಒದಗಿಸಿ ಕೊಡಬೇಕು’ ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, ‘ತಾವು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಪಡೆಯುವುದು ರೈತರ ಹಕ್ಕಾಗಿದೆ. ರೈತರು ಗೌರವಯುತವಾದ ಆದಾಯ ಬಯಸುತ್ತಾರೆಯೇ ಹೊರತು, ಅಶ್ರುವಾಯು ಪ್ರಯೋಗ, ಗುಂಡೇಟು, ಹಿಂಸಾಚಾರವನ್ನಲ್ಲ. ನ್ಯಾಯಯುತ ಬೇಡಿಕೆಗಳಿಗೆ ಹೋರಾಡುತ್ತಿರುವ ರೈತರೊಂದಿಗೆ ಕಾಂಗ್ರೆಸ್‌ ನಿಲ್ಲುತ್ತದೆ’ ಎಂದೂ ಹೇಳಿದ್ದಾರೆ.

ಛತ್ತೀಸಗಢದ ಅಂಬಿಕಾಪುರದಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮುಂಬರುವ ಲೋಕಸಭಾ ಚುನಾವಣೆಗಳ ನಂತರ ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ, ಎಂಎಸ್‌ಪಿಗೆ ಕಾನೂನು ಖಾತ್ರಿ ನೀಡಲಿದೆ’ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...