ತೆಲಂಗಾಣ | ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Date:

ಕೆಕೆಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಬೀದರ್‌-ಜಹೀರಾಬಾದ್‌ ಮುಖ್ಯ ಹೆದ್ದಾರಿಯ ಗಣೇಶಪುರ ಕ್ರಾಸ್‌ ಬಳಿ ಸೋಮವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್‌ ತಾಲೂಕಿನ ಗಣೇಶಪುರ ಗ್ರಾಮದ ಸಿದ್ರಾಮ (70), ಜಗನ್ನಾಥ (40) ರೇಣುಕಾ (36) ಮತ್ತು ವಿನಯಕುಮಾರ್ (14) ಮೃತರಾಗಿದ್ದು. ಪತಿ-ಪತ್ನಿ, ಮಗ ಹಾಗೂ ಮಾವ ನಾಲ್ಕು ಜನ ಒಂದೇ ಕುಟುಂಬದವರಾಗಿದ್ದಾರೆ ಎಂದು ತೆಲಂಗಾಣ ಪೊಲೀಸರು ಮಾಹಿತಿ ನೀಡಿದ್ದಾರೆ.

ಹೊಲದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್‌ ಬರುವಾಗ ಬಸ್‌ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದು ಸಿದ್ರಾಮ ಎಂಬುವರನ್ನು ಜಹೀರಾಬಾದ್‌ ಪಟ್ಟಣದ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ ಜಿಲ್ಲೆಯ ಗಡಿ ಸಮೀಪದಲ್ಲೇ ಬರುವ ತೆಲಂಗಾಣದ ಗಣೇಶಪುರ ಬಳಿ ಘಟನೆ ನಡೆದಿದ್ದು, ಸ್ಥಳದಲ್ಲೇ ಸಾವಿಗೀಡಾದವರ ಮೃತದೇಹ ಬೀದರ್‌ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಜಹೀರಾಬಾದ್‌ ತಾಲ್ಲೂಕಿನ ಹದನೂರ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...