ಸುದರ್ಶನ ಟಿವಿ ಕ್ಯಾಮೆರಾಮನ್‌ ಸುಶೀಲ್‌ ಅವಸ್ಥಿ ಮೇಲೆ ಮಾರಣಾಂತಿಕ ಹಲ್ಲೆ? ವೈರಲ್‌ ಆದ ಫೋಟೋ

Date:

ಬಲಪಂಥೀಯ ಬೆಂಬಲಿಗ ಸುದ್ದಿ ವಾಹಿನಿಗಳಲ್ಲಿ ಒಂದಾದ ಸುದರ್ಶನ ಟಿವಿಯ ಹಿರಿಯ ಕ್ಯಾಮೆರಾಮನ್‌ ಸುಶೀಲ್‌ ಅವಸ್ಥಿ ಅವರ ಮೇಲೆ ನ. 18 ರ ರಾತ್ರಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಲಖನೌನ ಆಲಂಬಾಗ್‌ ಪ್ರದೇಶದಲ್ಲಿ ಘಟನೆ ನಡೆದಿದ್ದು, ಐದು ಮಂದಿ ಅಪರಿಚಿತರು ಸುಶೀಲ್‌ ಅವರನ್ನು ಒತ್ತಾಯಪೂರ್ವಕವಾಗಿ ತಮ್ಮ ಕಾರಿನಲ್ಲಿ ಕರೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಲಾಗಿದೆ. ತಲೆ ಮತ್ತು ಮುಖದ ಮೂಳೆಗೆ ಗಂಭೀರವಾದ ಗಾಯಗಳಾಗಿವೆ ಎಂಬ ಮಾಹಿತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಸಹಿತ ಹರಿದಾಡುತ್ತಿದೆ.

ಬಿಜೆಪಿ ಪರ ಇರುವ ಸುದರ್ಶನ ಟಿವಿಯಲ್ಲಿ ಉತ್ತರಪ್ರದೇಶದ ಬಿಜೆಪಿ ಮುಖಂಡ ಮತ್ತು ಆತನ ಪುತ್ರನ ಭೂಹಗರಣ ಸಹಿತ ಹಲವು ಭ್ರಷ್ಟಾಚಾರದ ಬಗ್ಗೆ ವರದಿ ಮಾಡಲಾಗಿತ್ತು. ಆ ದ್ವೇಷಕ್ಕೆ ಆಗಂತುಕರು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಯಾವುದೇ ಮಾಧ್ಯಮ ಈ ಸುದ್ದಿಯನ್ನು ವರದಿ ಮಾಡಿಲ್ಲ. ಪೊಲೀಸರು ಸಹಿತ ಯಾವುದೇ ಮಾಹಿತಿ ನೀಡಿಲ್ಲ. ಸುದರ್ಶನ ಟಿವಿಯಿಂದಲೂ ಯಾವುದೇ ವರದಿ ಬಂದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...