ಜೀವ ತಗೆದ ಸಂತಾನಹರಣ ಚಿಕಿತ್ಸೆ: 12 ವರ್ಷಗಳ ತರುವಾಯ ವೈದ್ಯನಿಗೆ ಜೈಲು ಶಿಕ್ಷೆ

Date:

ಹನ್ನೆರೆಡು ವರ್ಷದ ಹಿಂದೆ ಇಡೀ ದೇಶವನ್ನೇ ಆಘಾತಕ್ಕೆ ತಳ್ಳಿದ್ದ ಘಟನೆಯ ಸಂಬಧಿತ ಆರೋಪಿ ವೈದ್ಯನಿಗೆ 25,000 ದಂಡ ಹಾಗೂ 2 ವರ್ಷ ಸೆರೆವಾಸ ವಿಧಿಸಿದ ಕೋರ್ಟ್‌.

2014ರಲ್ಲಿ, ಛತ್ತೀಸ್‌ಗಢದ ಬಿಸ್ಲಾಪುರದಲ್ಲಿರುವ ನೇಮಿಚಂದ್‌ ಜೈನ್‌ ಆಸ್ಪತ್ರೆಯಲ್ಲಿ ಸರ್ಕಾರ ನಡೆಸಿದ್ದ ಸಂತಾನಹರಣ ಶಸ್ತ್ರ ಚಿಕಿತ್ಸಾ ಕಾರ್ಯಗಾರದಲ್ಲಿ 15 ಜನ ಜೀವ ಕಳೆದುಕಂಡಿದ್ದರು. ಆ ದುರ್ಘಟನೆ ನಡೆದು ಬರೋಬ್ಬರಿ 12 ವರ್ಷಗಳು ಕಳೆದಿವೆ. ಇದೀಗ, ಪ್ರಕರಣದ ಆರೋಪಿ ವೈದೈ ಆರ್‌ಕೆ ಗುಪ್ತಾ ಅವರಿಗೆ ಶಿಕ್ಷೆ ವಿಧಿಸಿ ಜಿಸ್ಲಾಪುರ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶ ಶೈಲೇಶ್‌ ಕುಮಾರ್‌ ತಜ್ಞ ತೀರ್ಪು ನೀಡಿದ್ದಾರೆ.

ನ್ಯಾಯಾಲಯವು ಆರೋಪಿ ವೈದ್ಯನನ್ನು ಅಪರಾಧಿ ಎಂದು ಘೋಷಿಸಿದೆ. ಎರಡು ವರ್ಷಗಳ ಸೆರೆವಾಸ ಮತ್ತು 25,000 ದಂಡ ವಿಧಿಸಿದೆ. ಗುಪ್ತಾ ಜೈಲು ಪಾಲಾದರೆ, ಪ್ರಕರಣದ ಇತರ ಆರೋಪಿಗಳು ಖುಲಾಸೆಗೊಂಡು ಬಂಧನಮುಕ್ತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದ ವರದಿಯ ಪ್ರಕಾರ, ಈ ಘಟನೆಗೆ ವೈದನ ನಿರ್ಲ್ಯಕ್ಷವೇ ಕಾರಣ ಹಾಗೂ ಕಡಿಮೆ ಅವಧಿಯಲ್ಲಿ ಸರಣಿ ಶಸ್ತ್ರ ಚಿಕಿತ್ಸೆ ನಡೆಸಿದರಿಂದ ಇಂತಹ ದುರಂತ ಸಂಭವಿಸಿದೆ ಎಂದು ಹೇಳಿಕೆ ನೀಡಿದೆ. ಈ ಆದೇಶದ ಜೊತೆಗೆ ಸೆಕ್ಷನ್‌ 337 ರ ಅನ್ವಯ ಜೀವಕ್ಕೆ ಕುತ್ತು ತರುವ  ಅಪರಾಧದಲ್ಲಿ ಭಾಗಿಯಾದ ಕಾರಣ 500 ರೂ ದಂಡ ಹಾಗೂ 6 ತಿಂಗಳ ಸೆರೆವಾಸವನ್ನು ವಿಧಿಸಿದೆ.

2014ರ ನವೆಂಬರ್‌ ರಂದು ಬಿಸ್ಲಾಪುರ್‌ ಜಿಲ್ಲೆಯ ಪೆಂಡ್ರ, ಸರ್ಕಿ, ಪೆಂಡಾರ ಪ್ರದೇಶದಲ್ಲಿ ಸರ್ಕಾರ ಆಯೋಜಿಸಿದ್ದ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕ್ಯಾಂಪ್‌ನಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ನಿಗದಿತ ಗುರಿ ಸಾಧಿಸುವ ಉದ್ದೇಶದಿಂದ ರಾಜ್ಯದಲ್ಲಿ ಸಾಲು ಸಾಲು ಸಂತಾನ ಹರಣ ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರಿಗೆ ಕೆಲವೇ ಗಂಟೆಗಳಲ್ಲಿಆರೋಗ್ಯದಲ್ಲಿ ಏರು ಪೇರು ಕಂಡು ಬಂದಿತ್ತು. ತೀವ್ರ ಅನಾರೋಗ್ಯಕ್ಕೆ ಒಳಗಾದ ಮಹಿಳೆಯರನ್ನು ಆಸ್ಪತ್ರೆಗಳಿಗೆ ಕರೆದೊಯ್ದು ತೀವ್ರ ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿತ್ತು. ಆದರೂ, 15 ಮಂದಿ ಮಹಿಳೆಯರು ಪ್ರಾಣ ಕಳೆದುಕೊಂಡಿದ್ದರು.

ರಾಜ್ಯಗಳಿಗೆ ಇಂತಿಷ್ಟು ಟಾರ್ಗೆಟ್‌ ನೀಡಿ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಸಾಮೂಹಿಕಗೊಳಿಸುವ ಸರ್ಕಾರದ ಕ್ರಮದ ಕುರಿತು ಭಾರಿ ವಿರೋಧಗಳು ಭುಗಿಲೆದ್ದು ತಣ್ಣಗಾದವು. ಈ ಘಟನೆ ಸರ್ಕಾರದ ಜನಸಂಖ್ಯಾ ನಿಯಂತ್ರಣ ಯೋಜನೆಯಲ್ಲಿನ ಮಿತಿಗಳನ್ನು ಬಯಲು ಮಾಡಿತು.

ಹನ್ನೆರೆಡು ವರ್ಷಗಳ ಬಳಿಕ ಪ್ರಕರಣ ಕೈಗೆತ್ತಿಕೊಂಡ ಕೋರ್ಟ್‌, ಸರ್ಕಾರದ ವಿಫಲತೆಯನ್ನು ಪ್ರಶ್ನಿಸದೆ  ವೈದ್ಯನಿಗೆ 2 ವರ್ಷ ಸೆರೆ, 25000 ದಂಡ ವಿಧಿಸಿ ಕೈ ತೊಳೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...