ಪ್ರೀತಿಗೆ ವಿರೋಧ: ಮಗಳು ಮತ್ತು ಆಕೆಯ ಪ್ರಿಯಕರನನ್ನು ಕೊಂದ ದುರುಳ ತಂದೆ

Date:

ಒಂದು ತಿಂಗಳಿನಿಂದ ಕಾಣೆಯಾಗಿದ್ದ ಪ್ರೇಮಿಗಳ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಖಂಬಾಲ ಗ್ರಾಮದಲ್ಲಿ ನಡೆದಿದೆ. ಬಲಿಪಶುಗಳು ಫೆಬ್ರವರಿ 3ರಂದು ನಾಪತ್ತೆಯಾಗಿದ್ದರು, ಇದೀಗ ಅವರ ಮೃತದೇಹಗಳು ಪತ್ತೆಯಾಗಿವೆ. ಯುವತಿಯ ಕುಟುಂಬಸ್ಥರೇ ಅವರನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

ಮೃತರನ್ನು ಖಂಬಾಲ ಗ್ರಾಮದ ನಾಥಿ ಅಲಿಯಾಸ್ ಸೋನು ರಬಾರಿ (19) ಮತ್ತು ನವೀನ್ ಜೀವಭಾಯಿ ರಬಾರಿ (21) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ತಿಂಗಳಿನಿಂದ ಕಾಣೆಯಾಗಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಅವರನ್ನು ನಾಥಿ ಅವರ ತಂದೆ ಮತ್ತು ಕುಟುಂಬದ ಸದಸ್ಯರು ಕೊಂದಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.

ಈ ಲೇಖನ ಓದಿದ್ದೀರಾ?: ಇಸ್ರೇಲ್-ಅಮೆರಿಕಕ್ಕೆ ಪ್ರತಿರೋಧವೊಡ್ಡಿ ಯುದ್ಧದಲ್ಲಿ ಇರಾನ್ ಮೇಲುಗೈ ಸಾಧಿಸುತ್ತಿದೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆಯ ಸಮಯದಲ್ಲಿ ಯುವತಿಯ ತಂದೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ನಾಥಿ ಮತ್ತು ನವೀನ್ ಪ್ರೀತಿ ತಮಗೆ ಒಪ್ಪಿಗೆ ಇರಲಿಲ್ಲ. ಪ್ರೀತಿಯನ್ನು ಮುರಿದುಕೊಳ್ಳುವಂತೆ ಒತ್ತಾಯಿಸಿದರೂ, ನಾಥಿ ಒಪ್ಪಿರಲಿಲ್ಲ. ಇದರಿಂದ, ಅಸಮಾಧಾನಗೊಂಡು ತಾನು, ತನ್ನ ಪತ್ನಿ ಹಾಗೂ ತನ್ನ ಸೋದರಳಿಯ ಸೇರಿ ಪ್ರೇಮಿಗಳನ್ನು ಕೊಂದಿರುವುದಾಗಿ ಆರೋಪಿ ತಂದೆ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಪರಾಧವನ್ನು ಮರೆಮಾಚಲು ಆರೋಪಿಗಳು ಮೃತದೇಹಗಳನ್ನು ಹತ್ತಿರದ ಬಾವಿಗೆ ಎಸೆದಿದ್ದಾರೆ. ತಪ್ಪೊಪ್ಪಿಗೆಯ ನಂತರ, ಅಗ್ನಿಶಾಮಕ ದಳ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಜ್ಞರು ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...