ತಂದೆ, ಚಿಕ್ಕಪ್ಪ, ಅಜ್ಜನಿಂದಲೇ ಪೈಶಾಚಿಕ ಕೃತ್ಯ; ಬಾಲಕಿ ಮೇಲೆ ನಿರಂತರ ಅತ್ಯಾಚಾರ

Date:

13 ವರ್ಷದ ಅಪ್ತಾಪ್ತ ಬಾಲಕಿಯ ಮೆಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ನಿರಂತರವಾಗಿ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ಗರ್ಭಿಣಿಯಾಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

ಹಲವು ತಿಂಗಳುಗಳಿಂದ ತನ್ನ ತಂದೆ, ಚಿಕ್ಕಪ್ಪ ಹಾಗೂ ಅಜ್ಜ ತನ್ನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆ ಎರಡು ತಿಂಗಳ ಗರ್ಭಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬಿಧುನಾ ಪೊಲೀಸ್ ಠಾಣೆಯ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 64(F) (ಸಂಬಂಧಿ ಅಥವಾ ಪೋಷಕರಿಂದ ಅತ್ಯಾಚಾರ), 65(1) (16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ), 232 (ಸುಳ್ಳು ಸಾಕ್ಷ್ಯವನ್ನು ನೀಡುವಂತೆ ವ್ಯಕ್ತಿಯನ್ನು ಬೆದರಿಸುವುದು) ಹಾಗೂ ಪೋಕ್ಸೋ ಕಾಯ್ಡಯಡಿಎಫ್ಐಆರ್ ದಾಖಲಿಸಲಾಗಿದೆ ಎಂದು ಔರೈಯಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಅಲೋಕ್ ಮಿಶ್ರಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಯು ತನ್ನ ಸಂಬಂಧಿಯೊಂದಿಗೆ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಮಿಶ್ರಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...