ಹತ್ಯೆಯಾಗುವ ಭೀತಿ: ಪ್ರಿಯಕರನ ಜೊತೆ ಪತ್ನಿಯ ವಿವಾಹ ಮಾಡಿಸಿದ ಪತಿ

Date:

ಇತ್ತೀಚೆಗೆ ಒಂದಾದ ಮೇಲೊಂದರಂತೆ ಕೌಟುಂಬಿಕ ಹತ್ಯೆ ಪ್ರಕರಣಗಳು ಹೆಚ್ಚು ಸದ್ದು ಮಾಡುತ್ತಿವೆ. ಪ್ರಚೋದನಾಕಾರಿ ಮತ್ತು ಹತ್ಯೆಯನ್ನು ವೈಭವೀಕರಿಸುತ್ತಿರುವ ಇಂತಹ ಸುದ್ದಿಗಳು ಸಮಾಜದಲ್ಲಿ ಭಯ, ಆತಂಕ, ಭೀತಿಯನ್ನು ಹುಟ್ಟುಹಾಕುತ್ತಿವೆ. ಅಂತಹದೊಂದು ಭೀತಿ ಪ್ರಕರಣವಾಗಿ, ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನೊಂದಿಗೆ ವಿವಾಹ ಮಾಡಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕಳೆದ ವಾರ, ಉತ್ತರ ಪ್ರದೇಶದ ಮೀರತ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಪ್ರಿಕಕರನ ಜೊತೆ ಸೇರಿ ತನ್ನ ಪತಿಯನ್ನು ಹತ್ಯೆಗೈದು, ಮೃತದೇಹವನ್ನು ಕತ್ತರಿಸಿ ಸಿಮೆಂಟ್‌ ಡ್ರಮ್‌ನಲ್ಲಿ ತುಂಬಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಇಂದು ಪತ್ನಿಯನ್ನು ಬರ್ಬರವಾಗಿ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿವಾಹೇತರ ಸಂಬಂಧಗಳ ಕಾರಣಕ್ಕಾಗಿ ಪತ್ನಿಯನ್ನು ಪತಿ, ಪತಿಯನ್ನು ಪತ್ನಿ ಕೊಲೆ ಮಾಡುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ಸಾಮಾಜಿಕ ಅರಿವು ಮೂಡಿಸುವ ಅಥವಾ ಕೊಲೆ-ಕ್ರೌರ್ಯವನ್ನು ಖಂಡಿಸುವ ಯಾವುದೇ ತಿರುಳು ಇಲ್ಲದೆ, ಘಟನೆಯನ್ನು ವೈಭವೀಕರಿಸಿ, ರೋಮಾಂಚನಕಾರಿಯಾಗಿ ಘಟನೆಗಳನ್ನು ಮಾಧ್ಯಮಗಳು ಬಿತ್ತರಿಸುತ್ತಿವೆ. ಇಂತಹ ವರದಿಗಳು ಭಯ-ಭೀತಿಯ ವಾತಾವರಣನ್ನು ಹುಟ್ಟುಹಾಕುತ್ತಿವೆ. ಇವು, ಪತಿ-ಪತ್ನಿಯರಲ್ಲಿ ಭಯ, ಆತಂಕ ಮೂಡಲು ಕಾರಣವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ, ತಾನೂ ಕೊಲೆಯಾಗಬಹುದು ಎಂಬ ಭಯದಿಂದ ಉತ್ತರ ಪ್ರದೇಶದ ಸಂತ ಕಬೀರ್ ನಗರ ಬಳಿಯ ಕತಾರ್‌ ಜೋತ್‌ ಗ್ರಾಮದ ಬಬ್ಗೂ ಎಂಬಾತ ತನ್ನ ಪತ್ನಿಗೆ ಆಕೆಯ ಪ್ರಿಯಕರನೊಂದಿಗೆ ವಿವಾಹ ಮಾಡಿದ್ದಾರೆ. ಬಬ್ಲೂ ಮತ್ತು ಆತನ ಪತ್ನಿ 2017ರಲ್ಲಿ ವಿವಾಹವಾಗಿದ್ದರು. ಆದಾಗ್ಯೂ, ಬಬ್ಲೂ ಅವರು ಕೂಲಿ ಕೆಲಸಕ್ಕಾಗಿ ನೆರೆಯ ರಾಜ್ಯ ಬಿಹಾರಕ್ಕೆ ವಲಸೆ ಹೋಗಿದ್ದರು. ಈ ನಡುವೆ, ಬಬ್ಲೂ ಅವರ ಪತ್ನಿ ಬೇರೊಬ್ಬ ಪುರುಷ ವಿಕಾಸ್‌ ಎಂಬಾತನೊಂದಿಗೆ ವಿವಾಹೇತರ ಪ್ರೇಮ ಸಂಬಂಧ ಹೊಂದಿದ್ದರು. ಈ ಬಗ್ಗೆ, ತಿಳಿದ ಬಬ್ಲೂ ತನ್ನ ಪತ್ನಿಯನ್ನು ಕರೆದೊಯ್ದು ವಿಕಾಸ್‌ ಜೊತೆ ಮದುವೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಗ್ರಾಮದ ಶಿವ ದೇವಸ್ಥಾನದಲ್ಲಿ ತನ್ನ ಪತ್ನಿ ಮತ್ತು ವಿಕಾಸ್‌ ವಿವಾಹ ಮಾಡಿಸಿರುವ ಬಬ್ಲೂ, ಅವರಿಬ್ಬರ ವಿವಾಹವನ್ನು ಕಾನೂನಾತ್ಮಕವಾಗಿ ನೋಂದಣಿಯನ್ನೂ ಮಾಡಿಸಿದ್ದಾರೆ.

“ಇತ್ತೀಚಿನ, ವಿವಾಹೇತರ ಸಂಬಂಧದ ಕಾರಣಕ್ಕಾಗಿ ಪತಿ ಅಥವಾ ಪತ್ನಿಯರನ್ನು ಕೊಲ್ಲುವ ಘಟನೆಗಳು ನಡೆಯುತ್ತಿವೆ. ನನಗೆ ಯಾವುದೇ ಪ್ರಾಣಾಪಾಯ ಆಗದಂತೆ ಮುನ್ನೆಚ್ಚರಿಕೆಯ ಕಾರಣಕ್ಕಾಗಿ ಅವರಿಬ್ಬರಿಗೂ ವಿವಾಹ ಮಾಡಿಸಿದ್ದೇನೆ. ಮೀರತ್‌ನಲ್ಲಿ ನಡೆದ ಘಟನೆಯನ್ನು ಗಮನಿಸಿದ ಬಳಿಕ, ಈ ನಿರ್ಧಾರ ಕೈಗೊಂಡಿದ್ದೆ” ಎಂದು ಬಬ್ಲೂ ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...