ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

Date:

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಜನತೆಗೆ ಕರೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಸಂರಕ್ಷಿಸುವ ಹೋರಾಟ ಇಂದಿನಿಂದ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

“ನನ್ನ ಪ್ರೀತಿಯ ನಾಗರಿಕರೆ, 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಇಂದಿನಿಂದ ಮೊದಲ ಹಂತದ ಲೋಕಸಭಾ ಚುನಾವಣೆಗಳು ಆರಂಭಗೊಳ್ಳಲಿದ್ದು, ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ. ಭವಿಷ್ಯದ ನ್ಯಾಯ ನಿಮಗಾಗಿ ಕಾಯುತ್ತಿದೆ. ಆರ್ಥಿಕ ಸಬಲೀಕರಣ ಹಾಗೂ ಸಮಾನ ಅವಕಾಶದ ಹೊಸ ಯುಗವು ನಿಮ್ಮನ್ನು ಕೈಬೀಸಿ ಕರೆಯುತ್ತಿದೆ” ಎಂದು ಖರ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“10 ವರ್ಷಗಳ ದಾಖಲೆ ನಿರುದ್ಯೋಗದ ಮುಂದುವರಿಕೆಯ ಬದಲಿಗೆ ನೀವು ಉದ್ಯೋಗ ಕ್ರಾಂತಿಯ ಯುವ ನ್ಯಾಯಕ್ಕಾಗಿ, ಮಹಿಳೆಯರಿಗೆ ಆರ್ಥಿಕ ಸಬಲತೆ ಒದಗಿಸುವ ನಾರಿ ನ್ಯಾಯ, ಎಂಎಸ್‌ಪಿ ಒದಗಿಸುವ ರೈತರ ಏಳಿಗೆಯ ಕಿಸಾನ್‌ ನ್ಯಾಯ, ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸುವ ಶ್ರಮಿಕ ನ್ಯಾಯದ ಪರವಾಗಿ ನೀವು ಮತ ಚಲಾಯಿಸುತ್ತೀರಿ ಎಂದು ನನಗೆ ಖಚಿತವಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ದಲಿತ, ಆದಿವಾಸಿ, ಒಬಿಸಿ ಹಾಗೂ ಅಲ್ಪ ಸಂಖ್ಯಾತರನ್ನು ವಿಭಜಕ ರಾಜಕೀಯದ ಮೂಲಕ ತಾರತಮ್ಯವೆಸಗುತ್ತಿರುವವರ ವಿರುದ್ಧ ಅವರಿಗೆ ನ್ಯಾಯ ಒದಗಿಸುವ ಹಿಸ್ಸೆದರಿ ನ್ಯಾಯದ ಪರವಾಗಿ ನೀವು ಮತ ಚಲಾಯಿಸುತ್ತೀರಿ” ಎಂದು ನನಗೆ ದೃಢ ವಿಶ್ವಾಸವಿದೆ ಎಂದು ಖರ್ಗೆ ಹೇಳಿದ್ದಾರೆ.

“ನೀವು ಇವಿಎಂನಲ್ಲಿ ಗುಂಡಿ ಒತ್ತುವುದರ ಮೂಲಕ ಸರ್ವಾಧಿಕಾರದ ಮೂಲಕ ನಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿರುವವರ ವಿರುದ್ಧ ಪ್ರಜಾಪ್ರಭುತ್ವವನ್ನು ಸಂರಕ್ಷಿಸುವ ಕೆಲಸ ಮಾಡಿ” ಎಂದು ಖರ್ಗೆ ಜನತೆಗೆ ಕರೆ ನೀಡಿದ್ದಾರೆ.

ಭಾರತದ ಹಣೆಬರಹವನ್ನು ಮತದಾರರು ನಿರ್ಧರಿಸಲಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ನಿಮ್ಮ ಹಕ್ಕುಗಳನ್ನು ಚಲಾಯಿಸಬೇಕು ಎಂದು ಹೇಳಿರುವ ಖರ್ಗೆ ಮೊದಲ ಬಾರಿ ಮತದಾನ ಮಾಡುತ್ತಿರುವವರಿಗೆ ಸ್ವಾಗತ ಕೋರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...