ದ್ವೇಷ ಭಾಷಣ ಮಾಡುವವರ ವಿರುದ್ದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಸುಪ್ರೀಂ ಕೋರ್ಟ್

Date:

  • ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ
  • ಕಳೆದ ವರ್ಷ 3 ರಾಜ್ಯಗಳಿಗೆ ಅನ್ವಯವಾಗುವಂತೆ ಹೊರಡಿಸಿದ್ದ ಆದೇಶ

ಯಾವುದೇ ಒಂದು ಧರ್ಮದ ವಿರುದ್ಧ ದ್ವೇಷ ಭಾಷಣ ಮಾಡುವ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳುವಂತೆ ದೇಶದ ಎಲ್ಲ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್‌ ಸೂಚಿನೆ ನೀಡಿದೆ.

ದೇಶದ ಹಲವು ಭಾಗಗಳಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಇದುವರೆಗೆ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ನ್ಯಾ. ಕೆ.ಎಂ ಜೋಸೆಫ್ ಮತ್ತು ಬಿ.ವಿ ನಾಗರತ್ನ ಅವರಿದ್ದ ದ್ವಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ.

“ದ್ವೇಷ ಭಾಷಣ ಮಾಡುವ ಯಾವುದೇ ವ್ಯಕ್ತಿಯ ವಿರುದ್ಧ ಯವುದೇ ದೂರುಗಳು ಬರದಿದ್ದರೂ ಕೂಡ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು” ಎಂದು ತಾಖೀತು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ವೇಳೆ ದ್ಷೇಷ ಭಾಷಣ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೇ ಹೋದರೆ, ಅದನ್ನು ನ್ಯಾಯಾಂಗ ನಿಂದನೆಯೆಂದು ಪರಿಗಣಿಸಲಾಗುತ್ತದೆ” ಎಂದು ಎಚ್ಚರಿಕೆಯನ್ನು ಸಹ ನೀಡಿದೆ.

ಈ ಸುದ್ದಿ ಓದಿದ್ದೀರಾ? : ಬಿಡುವಿಲ್ಲದ ಪ್ರಚಾರ; ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ

“ದ್ವೇಷ ಭಾಷಣವನ್ನು ಗಂಭೀರ ಅಪರಾಧವೆಂದು ಪರಿಗಣಿಸಬೇಕು. ಇಂತಹ ಪ್ರಕರಣಗಳು ದೇಶದ ಜಾತ್ಯಾತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕೋರ್ಟ್‌, ವಿಚಾರಣೆಯನ್ನು ಮೇ 12ಕ್ಕೆ ಮುಂದೂಡಿದೆ.

ದ್ವೇಷ ಭಾಷಣ ಪ್ರಕರಣಗಳಲ್ಲಿ ಪ್ರಥಮ ಮಾಹಿತಿ ವರದಿಗಳ (ಎಫ್‌ಐಆರ್) ಸ್ವಯಂಚಾಲಿತ ನೋಂದಣಿಗೆ ಸಂಬಂಧಿಸಿದಂತೆ 2022ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಈಗ ಈ ನಿಯಮವನ್ನು ವಿಸ್ತರಿಸಿದ್ದು, ದೇಶದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...