ನಾಪತ್ತೆಯಾಗಿದ್ದ ಸಿನಿಮಾ ನಿರ್ಮಾಪಕ ಗುಜರಾತ್ ವಿಮಾನ ದುರಂತದಲ್ಲಿ ಸಾವು; ಡಿಎನ್‌ಎ ಪರೀಕ್ಷೆಯಲ್ಲಿ ದೃಢ

Date:

ನಾಪತ್ತೆಯಾಗಿದ್ದ ಸಿನಿಮಾ ನಿರ್ಮಾಪಕ ಮಹೇಶ್ ಕಲಾವಾಡಿಯಾ ಯಾನೆ ಮಹೇಶ್ ಜಿರಾವಾಲಾ ಅವರು ಜೂನ್ 12ರಂದು ನಡೆದ ಗುಜರಾತ್ ವಿಮಾನ ದುರಂತರದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ಇಂಡಿಯಾ AI-171 ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜಿನ ಆವರಣಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿದ್ದ 242 ಮಂದಿಯಲ್ಲಿ 241 ಮಂದಿ ಮತ್ತು ಹಾಸ್ಟೆಲ್‌, ಮೆಸ್‌ನಲ್ಲಿದ್ದ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಈವರೆಗೂ ಮೃತರ ಅಧಿಕೃತ ಅಂಕಿಅಂಶ ಬಿಡುಗಡೆಯಾಗಿಲ್ಲ.

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ಸಿನಿಮಾ ನಿರ್ಮಾಪಕ ನಾಪತ್ತೆ: ಅಪಘಾತದಲ್ಲಿ ಮೃತಪಟ್ಟಿರುವ ಶಂಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸ್ಟೆಲ್ ಆವರಣದಲ್ಲಿ ಮೃತಪಟ್ಟವರ ಪೈಕಿ ಸಿನಿಮಾ ನಿರ್ಮಾಪಕ ಮಹೇಶ್ ಕಲಾವಾಡಿಯಾ ಕೂಡಾ ಒಬ್ಬರಾಗಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಡಿಎನ್‌ಎ ಪರೀಕ್ಷೆಗೆ ಮಾದರಿಯನ್ನೂ ಒದಗಿಸಿದ್ದರು. ಇಂದು(ಜೂನ್ 21) ಡಿಎನ್‌ಎ ಪರೀಕ್ಷೆಯಲ್ಲಿ ಮಹೇಶ್ ಮೃತಪಟ್ಟಿರುವುದು ಖಚಿತವಾಗಿದೆ.

ಗುಜರಾತ್ ವಿಮಾನ ದುರಂತ ನಡೆದ ಮಧ್ಯಾಹ್ನ ಲಾ ಗಾರ್ಡನ್ ಪ್ರದೇಶದಲ್ಲಿ ಯಾರನ್ನೋ ಭೇಟಿಯಾಗಲು ಹೋಗಿದ್ದರು, ಆದರೆ ಮರಳಿ ಬಂದಿಲ್ಲ ಎಂದು ಪತ್ನಿ ಹೇತಲ್ ದೂರು ನೀಡಿದ್ದರು. ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಅವರ ಮೊಬೈಲ್ ಫೋನ್‌ನ ಕೊನೆಯ ಸ್ಥಳವು ಅಪಘಾತ ನಡೆದ ಸ್ಥಳದಿಂದ 700 ಮೀಟರ್ ದೂರದಲ್ಲಿ ಕಾಣಿಸಿಕೊಂಡಿತ್ತು.

“ಮಧ್ಯಾಹ್ನ 1:40ರ ಸುಮಾರಿಗೆ(ವಿಮಾನ ದುರಂತ ನಡೆದ ಸಮಯ) ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಅವರ ಸ್ಕೂಟರ್ ಮತ್ತು ಮೊಬೈಲ್ ಫೋನ್ ಕಾಣೆಯಾಗಿದೆ. ಇದೆಲ್ಲವೂ ಅಸಾಮಾನ್ಯ. ಅವರು ಮನೆಗೆ ಬರಲು ಆ ಮಾರ್ಗದಲ್ಲಿ ಎಂದಿಗೂ ಬಂದಿಲ್ಲ. ಅಪಘಾತದಿಂದ ಮೃತಪಟ್ಟವರಲ್ಲಿ ಅವರೂ ಒಬ್ಬರಾಗಿರುವ ಆತಂಕವಿದೆ. ಆದ್ದರಿಂದ ನಾವು ಡಿಎನ್ಎ ಮಾದರಿಗಳನ್ನು ಸಲ್ಲಿಸಿದ್ದೇವೆ” ಎಂದು ಹೇತಲ್ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...