ಗುಜರಾತ್ ವಿಮಾನ ದುರಂತ | ಡಿಎನ್‌ಎ ಮೂಲಕ ಮೃತರೆಲ್ಲರ ಗುರುತು ಪತ್ತೆ: ಒಟ್ಟು 260 ಮಂದಿ ಸಾವು

Date:

ಡಿಎನ್‌ಎ ಹೋಲಿಕೆ ಮೂಲಕ ಗುಜರಾತ್ ವಿಮಾನ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ ಮಾಡಲಾಗಿದ್ದು, ಒಟ್ಟಾಗಿ ಈ ಭೀಕರ ವಿಮಾನ ಅಪಘಾತದಲ್ಲಿ 260 ಮಂದಿ ಸಾವನ್ನಪ್ಪಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.

2023ರ ಜೂನ್ 12ರಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಅಪಘಾತಕ್ಕೀಡಾಗಿದ್ದು ಸುಮಾರು 16 ದಿನಗಳ ನಂತರ ಎಲ್ಲ ಮೃತದೇಹಗಳ ಗುರುತು ಪತ್ತೆಹಚ್ಚಲಾಗಿದೆ. ದುರಂತದಲ್ಲಿ ಗುಜರಾತ್‌ನ ಭುಜ್‌ನ 32 ವರ್ಷದ ಪ್ರಯಾಣಿಕ ಹೊರತುಪಡಿಸಿ ವಿಮಾನದಲ್ಲಿದ್ದ 241 ಮಂದಿಯೂ ಮೃತಪಟ್ಟಿದ್ದಾರೆ. ಇದನ್ನು ಹೊರತುಪಡಿಸಿ ವಿಮಾನ ಪತನಗೊಂಡ ಸ್ಥಳದಲ್ಲಿದ್ದ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | 190 ಸಂತ್ರಸ್ತರ ಗುರುತು ಪತ್ತೆ, 159 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ವೈದ್ಯಕೀಯ ಅಧಿಕಾರಿಗಳು ಪಟ್ಟು 270 ಮೃತದೇಹಗಳು ಲಭಿಸಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆಗೂ ಲಭಿಸಿದೆ ಎನ್ನಲಾದ ಮೃತದೇಹಗಳ ಸಂಖ್ಯೆಯ ನಡುವೆ ವ್ಯತ್ಯಾಸ ಕಂಡುಬಂದಿತ್ತು. ಇದು ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಅಂತಿಮವಾಗಿ ಮೃತರ ಸಂಖ್ಯೆಯನ್ನು ಖಚಿತಪಡಿಸಲಾಗಿದೆ.

ಅಂತಿಮವಾಗಿ ಲಂಡನ್‌ಗೆ ತೆರಳುತ್ತಿದ್ದ ಭುಜ್‌ನ ದಹಿಂಸರ್ ನಿವಾಸಿ ಅನಿಲ್ ಲಾಲ್ಜಿ ಖಿಮಾನಿ ಡಿಎನ್‌ಎ ಹೊಂದಿಕೆ ಮಾಡಲಾಗಿದೆ. ಬೋರ್ಡಿಂಗ್ ಪಟ್ಟಿಯಲ್ಲಿ ಹೆಸರಿದ್ದರೂ ಡಿಎನ್‌ಎ ಹೊಂದಾಣಿಕೆ ವಿಳಂಬವಾಗಿದೆ. ತಂದೆ ಲಾಲ್ಜಿಭಾಯಿ ಖಿಮಾನಿ ಅವರಿಗೆ ಮಗನ ದೇಹವನ್ನು ಗುರುತಿಸಲೂ ಸಾಧ್ಯವಾಗದ ಕಾರಣ ಹೆಚ್ಚು ಸಮಯ ತೆಗೆದುಕೊಂಡಿದೆ ಹೇಳಲಾಗಿದೆ. ಸದ್ಯ ಮೃತದೇಹ ಹಸ್ತಾಂತರಿಸಲಾಗಿದೆ.

ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ರಾಕೇಶ್ ಜೋಶಿ ಅವರ ಪ್ರಕಾರ, ಒಟ್ಟು 260 ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಮೃತರಲ್ಲಿ, 181 ಭಾರತೀಯ ಪ್ರಜೆಗಳಾಗಿದ್ದರೆ, 52 ಯುಕೆ, ಏಳು ಪೋರ್ಚುಗಲ್, ಒಬ್ಬ ಕೆನಡಿಯನ್ ಪ್ರಜೆಗಳಾಗಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿದ್ದ 19 ಮಂದಿಯೂ ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...