ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿದ್ದಕ್ಕೆ ಇಬ್ಬರು BJP ಸಂಸದರ ವಿರುದ್ಧ ಎಫ್‌ಐಆರ್

Date:

ದೇವಾಲಯದ ಗರ್ಭಗುಡಿಗೆ ಬಲವಂತವಾಗಿ ಪ್ರವೇಶಿಸಿದ್ದಾರೆ. ಆ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಬಿಜೆಪಿ ಸಂಸದರ ವಿರುದ್ಧ ಪ್ರರಕಣ ದಾಖಲಾಗಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಬಿಜೆಪಿಯೇ ಅಧಿಕಾರದಲ್ಲಿರುವ ಜಾರ್ಖಂಡ್‌ನ ದೇವಗಢದಲ್ಲಿ ಘಟನೆ ನಡೆದಿದೆ. ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ಮನೋಜ್ ತಿವಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಇಬ್ಬರೂ ಸಂಸದರು ಆಗಸ್ಟ್‌ 2ರಂದು ದೇವಗಢದ ಬಾಬಾ ಬೈದನಾಥ್ ದೇವಾಲಯದ ಗರ್ಭಗುಡಿಗೆ ಬಲವಂತವಾಗಿ ಪ್ರವೇಶಿಸಿದ್ದರು. ಅವರು ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಾಲಯದ ಅರ್ಚಕ ಕಾರ್ತಿಕ್ ನಾಥ್ ಠಾಕೂರ್ ಎಂಬವರು ಸಂಸದರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ; “ಶ್ರಾವಣ ಮಾಸದಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಹೀಗಾಗಿ, ವಿಐಪಿ ಮತ್ತು ವಿವಿಐಪಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹೀಗಿದ್ದರೂ, ಬಿಜೆಪಿ ಸಂಸದರು ಆಗಸ್ಟ್ 2ರಂದು ರಾತ್ರಿ 8.45 ರಿಂದ 9 ಗಂಟೆಯ ನಡುವೆ ಬಲವಂತವಾಗಿ ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನೀಡಿದ ದೂರಿ ಆಧಾರದ ಮೇಲೆ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಾಬಾ ಬೈದ್ಯನಾಥ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...