ಮದುವೆಯ ನೆಪದಲ್ಲಿ ಮಹಿಳಾ ಪೊಲೀಸ್ ಮೇಲೆ ಸೇನಾ ಅಧಿಕಾರಿ ಅತ್ಯಾಚಾರ

Date:

ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಅವರ ಮೇಲೆ ಸೇನಾ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 2012ರಲ್ಲಿ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಿಸಲಾಗಿದೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಪೇದೆ ಪ್ರಸ್ತುತ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಆರೋಪಿ ಕರ್ನಲ್ ವರುಣ್ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 69, 351 (2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಆರೋಪಿಯು ತನ್ನ ವಿರುದ್ಧ ಪೊಲೀಸ್‌ ದೂರು ದಾಖಲಿಸಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಪ್ರಾಣ ಭಯದಲ್ಲಿ ಈವರೆಗೆ ದೂರು ದಾಖಲಿಸಿರಲಿಲ್ಲ ಎಂದು ಸಂತ್ರಸ್ತ ಪೇದೆ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ದಾಖಲಿಸಿರುವ ಸಂತ್ರಸ್ತೆ, “2012ರಲ್ಲಿ ಮಧ್ಯಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಆರೋಪಿಯು ಸೇನಾ ಕ್ಯಾಂಟಿನ್‌ನಲ್ಲಿ ನನ್ನನ್ನು ಮೊದಲ ಬಾರಿಗೆ ಭೇಟಿ ಮಾಡಿದ್ದರು. ತಾನು ಅವಿವಾಹಿತನೆಂದು ಹೇಳಿಕೊಂಡಿದ್ದರು. ಆಗ್ಗಾಗ್ಗೆ ಭೇಟಿಯಾಗುತ್ತಿದ್ದರು. ಬಳಿಕ, ಮದುವೆಯಾಗುವ ಪ್ರಸ್ತಾಪ ಇಟ್ಟಿದ್ದರು. ಅದೇ ಭರವಸೆ ಮೇಲೆ ನನ್ನನ್ನು ಆತನ ಸ್ಥಳಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

“ಅಲ್ಲದೆ, ಆತನಿಗೆ ಮೊದಲೇ ವಿವಾಹವಾಗಿದೆ ಎಂಬುದು 2013ರಲ್ಲಿ ಗೊತ್ತಾಯಿತು. ಈ ಬಗ್ಗೆ ಪ್ರಶ್ನಿಸಿದಾಗ ತಮ್ಮ ಪತ್ನಿಯಿಂದ ವಿಚ್ಛೇದನ ಪಡೆಯುತ್ತಿರುದಾಗಿ ಹೇಳಿದ್ದರು. ಅಲ್ಲದೆ, ನನ್ನನ್ನು ಮದುವೆಯಾಗುವಂತೆ ಕೇಳಿದರೆ, ನಾನಾ ರೀತಿಯ ನೆಪಗಳನ್ನು ಹೇಳಿಕೊಂಡು ಮದುವೆಯನ್ನು ವಿಳಂಬಗೊಳಿಸಿದರು. ಅಲ್ಲದೆ, ಆತ ಇನ್ನೂ ಕೆಲವು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದು ಗೊತ್ತಾಯಿಸಿತು. ಈ ಬಗ್ಗೆ ಪ್ರಶ್ನಿಸಿ, ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು” ಎಂದು ಸಂತ್ರಸ್ತ ಪೇದೆ ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಆಘಾತಕಾರಿ ಘಟನೆ | ಮಹಿಳೆ ಮೇಲೆ 18 ಕಾಮುಕರಿಂದ 18 ತಿಂಗಳು ನಿರಂತರ ಸಾಮೂಹಿಕ ಅತ್ಯಾಚಾರ

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಭೋಪಾಲ್ ಪೊಲೀಸ್ ಮಹಿಳಾ ಭದ್ರತಾ ಸಹಾಯಕ ಆಯುಕ್ತೆ ನಿಧಿ ಸಕ್ಸೇನಾ, “ಆರೋಪಿ ವರುಣ್‌ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ. ನಾವು ಅವರು ಸೇವೆ ಸಲ್ಲಿಸುತ್ತಿರುವ ಘಟಕಕ್ಕೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದೇವೆ. ಅವರು ವಿಚಾರಣೆ ಬರುವಂತೆ ಸೂಚನೆ ನೀಡಿದ್ದೇವೆ. ವಿಚಾರಣೆಗೆ ಬಾರದಿದ್ದರೆ, ಬಂಧಿಸಿ ಕರೆತರಲಾಗುತ್ತದೆ” ಎದು ಹೇಳಿದ್ದಾರೆ.

“ಮದುವೆಯಾಗುವ ನೆಪದಲ್ಲಿ ಸಂತ್ರಸ್ತ ಪೇದೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾರೆ. ತನ್ನ ಉದ್ದೇಶವನ್ನು ಈಡೇರಿಸಿಕೊಂಡ ಬಳಿಕ, ತಾನು ನೀಡಿದ್ದ ಭರವಸೆಯನ್ನು ಉಲ್ಲಂಘಿಸುವುದನ್ನು ಅತ್ಯಾಚಾರವೆಂದು ಪರಿಗಣಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...