ಬುಲ್ಡೋಜರ್‌ನಿಂದ ಮನೆ ಉರುಳಿಸುವುದು ಕೂಡ ಭಯೋತ್ಪಾದನೆ: ಡಾ ಮೆಡುಸಾ ವಿರುದ್ಧ ಎಫ್‌ಐಆರ್

Date:

ಲಖನೌ ವಿಶ್ವವಿದ್ಯಾಲಯದ ಭಾಷಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಮಾದ್ರಿ ಕಾಕೊಟಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ವಿವಾದಿದ ಪೋಸ್ಟ್‌ ಪ್ರಕಟಿಸಿದ್ದಕ್ಕಾಗಿ ಎಬಿವಿಪಿ ಕಾರ್ಯಕರ್ತರ ದೂರಿನ ಮೇರೆಗೆ ದೇಶದ್ರೋಹ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಕುತೂಹಲವೆಂದರೆ ಡಾ. ಮಾದ್ರಿ ಕಕೋಟಿ ಅವರು ಎಕ್ಸ್‌ನಲ್ಲಿ 1.50 ಲಕ್ಷ ಬೆಂಬಲಿಗರನ್ನು ಹೊಂದಿದ್ದಾರೆ.ಡಾ ಮೆಡುಸಾ ಎಂಬ ಹೆಸರಿನಲ್ಲಿ ಖ್ಯಾತಿ ಹೊಂದಿದ್ದಾರೆ. ಪ್ರಾಧ್ಯಾಪಕಿ ಪೋಸ್ಟ್‌ ಮಾಡಿರುವ ವಿವಾದಿತ ವಿಡಿಯೋದಲ್ಲಿ ‘ಯಾರನ್ನಾದರೂ ಧರ್ಮದ ಹೆಸರಿನಲ್ಲಿ ಕೊಲ್ಲುವುದು ಹತ್ಯೆಯಾಗಿದೆ. ಹಾಗೆಯೇ ಧರ್ಮದ ಹೆಸರಿನಿಂದ ಜನರನ್ನು ಉದ್ಯೋಗದಿಂದ ವಂಚಿತರನ್ನಾಗಿಸುವುದು, ಬಾಡಿಗೆಗೆ ಮನೆಗಳನ್ನು ನೀಡದಿರುವುದು, ಬುಲ್ಡೋಜರ್‌ನಿಂದ ಮನೆಗಳನ್ನು ನಾಶಪಡಿಸುವುದು ಸೇರಿ ಇಂತಹ ಹಲವು ಕೃತ್ಯಗಳನ್ನು ಎಸಗುವುದು ಕೂಡ ಭಯೋತ್ಪಾದನೆಯಾಗಿದೆ’ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದ್ರಿ ಕಾಕೋಟಿ ಅವರ ವಿರುದ್ಧ ಎಬಿವಿಪಿ ಸದಸ್ಯರಾದ ಜತಿನ್‌ ಶುಕ್ಲಾ ಅವರು ಪ್ರಕರಣ ದಾಖಲಿಸಿದ್ದಾರೆ. ಪ್ರಾಧ್ಯಾಪಕಿಯ ವಿರುದ್ಧ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಆವರಣದಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿರುವ ಕಾಕೋಟಿ ಅವರು, ನಾನು ಹೇಳಿರುವುದು ಶೇ.100 ರಷ್ಟು ಸತ್ಯವಾಗಿದೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಇದು ಸಾಮಾನ್ಯವಾಗಿದ್ದು, ಭಯೋತ್ಪಾದನೆಯು ಅದನ್ನು ಉಂಟುಮಾಡುವ ವ್ಯಾಖ್ಯಾನದೊಳಗೆಯೇ ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇದು ನಮ್ಮ ಕಾಶ್ಮೀರ, ದ್ವೇಷವು ಪ್ರೀತಿಗೆ ಸೋತಿದೆ; ದಾಳಿಯ ನಂತರ ಪಹಲ್ಗಾಮ್‌ಗೆ ನಟ ಅತುಲ್ ಕುಲಕರ್ಣಿ ಭೇಟಿ

ಈ ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಗತ್ಯವಿದ್ದರೆ,ಪ್ರಾಧ್ಯಾಪಕಿ ಮಾದ್ರಿ ಕಾಕೋಟಿ ಅವರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕಾಕೋಟಿಯವರ ಪೋಸ್ಟ್‌ನ ವಿವಾದ ಉಲ್ಬಣಗೊಂಡ ನಂತರ , ಲಖನೌ ವಿಶ್ವವಿದ್ಯಾಲಯವು ಡಾ. ಮಾದ್ರಿ ಕಾಕೋಟಿಯವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದು ಲಖನೌ ವಿಶ್ವವಿದ್ಯಾಲಯ ಮತ್ತು ರಾಷ್ಟ್ರದ ಪ್ರತಿಷ್ಠೆಯನ್ನು ಹಾಳು ಮಾಡುವ ಸಾಧ್ಯತೆಯಿದೆ. ಅವರ ಕೃತ್ಯ ದೇಶ ಮತ್ತು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಡಾ. ಮಾದ್ರಿ ಕಾಕೋಟಿ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾಕೋಟಿ ವಿರುದ್ಧ ಸೆಕ್ಷನ್ 196(1)(ಎ) ಧರ್ಮ, ಜಾತಿ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುವುದು, 197(1)ರ ರಾಷ್ಟ್ರೀಯ ಏಕೀಕರಣಕ್ಕೆ ಹಾನಿ ಮಾಡುವ ಅಕ್ರಮಗಳು ಮುಂತಾದವುಗಳಡಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...