ಉತ್ತರಪ್ರದೇಶದಲ್ಲಿ ನ್ಯಾಯಾಧೀಶೆಯ ನಿಗೂಢ ಸಾವು; ಪೊಲೀಸ್ ತನಿಖೆಯ ಬಗ್ಗೆ ಕುಟುಂಬದ ಅಸಮಾಧಾನ

Date:

ಉತ್ತರಪ್ರದೇಶದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ನ್ಯಾಯಾಧೀಶೆಯ ನಿಗೂಢ ಸಾವು ಸಂಬಂಧಿಸಿ ಕುಟುಂಬದವರು ಪೊಲೀಸರ ನಿರ್ಲಕ್ಷ್ಯವನ್ನು ಪ್ರಶ್ನಿಸಿದ್ದಾರೆ.

ಉತ್ತರಪ್ರದೇಶದ ಬುದೌನ್ ಜಿಲ್ಲೆಯಲ್ಲಿ ನ್ಯಾಯಾಧೀಶೆಯ ನಿಗೂಢ ಸಾವು ಸಂಬಂಧಿಸಿ ಪೊಲೀಸರು ತನಿಖೆಯಲ್ಲಿ ಅಲಕ್ಷ್ಯವಹಿಸಿದ ಆರೋಪ ಎದುರಿಸುತ್ತಿದ್ದಾರೆ.

ಬುದೌನ್ ಜಿಲ್ಲೆಯಲ್ಲಿ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡ ಮರುದಿನವೇ ಫೆಬ್ರವರಿ 4ರಂದು ಮಹಿಳೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ತಂದೆ ಕೊಲೆ ಆರೋಪ ಹೊರಿಸಿದ ನಂತರ ಪೊಲೀಸರು ಅಪರಿಚಿತ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ.

ಮೂಲತಃ ಮಾವು ಜಿಲ್ಲೆಯವರಾದ 29 ವರ್ಷ ಪ್ರಾಯದ ಜ್ಯೋತ್ಸ್ನಾ ರೈ ಬೂದಾನ್‌ನಲ್ಲಿ ಸಿವಿಲ್ ನ್ಯಾಯಾಧೀಶರಾಗಿದ್ದರು. ಅವರ ಮೃತದೇಹದ ಜೊತೆಗೆ ಆತ್ಮಹತ್ಯೆ ಪತ್ರವೂ ದೊರೆತಿತ್ತು. ನ್ಯಾಯಾಧೀಶರ ತಂದೆ ಅಶೋಕ್ ಕುಮಾರ್ ರೈ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಮಗಳನ್ನು ಮೊದಲು ಕೊಲೆ ಮಾಡಿ ನಂತರ ನೇಣು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರಣೋತ್ತರ ವರದಿಯನ್ನು ಆಧರಿಸಿ ತನಿಖೆ ನಡೆಸಲಿದ್ದೇವೆ. ಮಹಿಳೆಯ ತಂದೆ ಕೊಲೆ ಆರೋಪ ಹೊರಿಸಿ ದೂರು ಸಲ್ಲಿಸಿದ್ದಾರೆ ಎಂದು ಬೂದೌನ್ ನಗರ ಪೊಲೀಸ್ ಅಧಿಕಾರಿ ಅಲೋಕ್ ಮಿಶ್ರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಧೀಶರು ಕಚೇರಿಗೆ ಆಗಮಿಸದಿರುವುದು ಮತ್ತು ಸಂಪರ್ಕ ಸಾಧ್ಯವಾಗದೆ ಇದ್ದಾಗ ಸಹೋದ್ಯೋಗಿಗಳು ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಶನಿವಾರ ಬೆಳಿಗ್ಗೆ ಮಹಿಳೆಯ ಮೃತದೇಹ ಮತ್ತು ಮರಣಪತ್ರ ದೊರೆತಿತ್ತು. ಮರಣಪತ್ರದಲ್ಲಿ ಯಾರ ಮೇಲೂ ಆರೋಪ ಹೊರಿಸಿರಲಿಲ್ಲ. ಪ್ರಾಥಮಿಕ ತನಿಖೆಯಲ್ಲಿ ನ್ಯಾಯಾಧೀಶರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶರ ಸಹೋದರ ಹಿಮಾಂಶು ಶೇಖರ್ ರೈ ಅವರು ಪೊಲೀಸ್ ತನಿಖೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಗಮಿಸಿದಾಗ ಮನೆಯ ಬಾಗಿಲು ತೆರೆದೇ ಇದ್ದರೂ, ಬೆರಳಚ್ಚು ಸಾಕ್ಷ್ಯಗಳನ್ನೂ ತೆಗೆದುಕೊಂಡಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...