ಒಡಿಶಾ | ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ; ತಪ್ಪಿದ ಪ್ರಾಣಹಾನಿ

Date:

  • ಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ರೈಲಿನ ಎಸಿ ಕೋಚ್‌ನಲ್ಲಿ ಬೆಂಕಿ
  • ಬಾಲಾಸೋರ್‌ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಮಂದಿ ಸಾವು

ಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಗುರುವಾರ ರಾತ್ರಿ (ಜೂನ್ 8) ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಿಂದ ಪ್ರಯಾಣಿಕರು ಭಯಭೀತರಾಗಿದ್ದರು. ಆದರೆ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೂರ್ವ ಕರಾವಳಿ ರೈಲ್ವೆ ತಿಳಿಸಿದೆ.

ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲು ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣವನ್ನು ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಂಜಿನ್‌ ತಾಂತ್ರಿಕ ಕಾರಣಗಳಿಂದ ಒಡಿಶಾದ ದುರ್ಗ್‌-ಪುರಿ ರೈಲಿನ ಬ್ರೇಕ್ ಪ್ಯಾಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯು ಬ್ರೇಕ್ ಪ್ಯಾಡ್‌ಗಳಿಗೆ ಸೀಮಿತವಾಗಿದೆ. ಈ ಹಿನ್ನೆಲೆ ಯಾವುದೇ ಹಾನಿಯಾಗಿಲ್ಲ” ಎಂದು ಪೂರ್ವ ಕರಾವಳಿ ರೈಲ್ವೆಯು ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಪ್ರಯಾಣಿಕರು ಭಯಗೊಂಡರು. ಇದರಿಂದ ರೈಲಿನಲ್ಲಿದ್ದ ಬಹುತೇಕರು ರೈಲಿನಿಂದ ಹೊರಬಂದರು. ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಲಾಯಿತು.

ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು ಎಂದು ಪೂರ್ವ ಕರಾವಳಿ ರೈಲ್ವೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಪ್ರತ್ಯೇಕ ಆಡಳಿತ ಕೋರಿದ್ದ 10 ಶಾಸಕರಿಗೆ ಶೋಕಾಸ್‌ ನೋಟಿಸ್

ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗಾ ಬಜಾ ನಿಲ್ದಾಣದಲ್ಲಿ ಜೂನ್ 2 ರಂದು ಬೆಂಗಳೂರು-ಹೌರಾ ಸೂಪತ್‌ಫಾಸ್ಟ್ ಎಕ್ಸ್‌ಪ್ರೆಸ್‌, ಶಾಲಿಮಾರ್ – ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್‌ ಮತ್ತು ಸರಕು ರೈಲುಗಳ ನಡುವೆ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಜನರು ಮೃತಪಟ್ಟು, 1100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...