ಮಹಾರಾಷ್ಟ್ರ | ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ; ಮಗು ಸೇರಿ ಎಂಟು ಮಂದಿ ಸಾವು

Date:

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲ್‌ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಕಾರ್ಖಾನೆಯಲ್ಲಿ ಬೆಳಗಿನ ಜಾವ 3:45 ರ ಸುಮಾರಿಗೆ ಸರ್ಕ್ಯೂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಹೈದರಾಬಾದ್‌ನ ಚಾರ್​ಮಿನಾರ್ ಬಳಿ ಭಾರಿ ಬೆಂಕಿ ಅವಘಡ; ಕನಿಷ್ಠ 17 ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರಲ್ಲಿ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್ ಹಸನ್‌ಭಾಯ್ ಮನ್ಸೂರಿ, ಅವರ ಒಂದೂವರೆ ವರ್ಷದ ಮೊಮ್ಮಗ ಸೇರಿದಂತೆ ಅವರ ಕುಟುಂಬದ ಮೂವರು ಸದಸ್ಯರು ಮತ್ತು ನಾಲ್ವರು ಕಾರ್ಮಿಕರು ಸೇರಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಇನ್ನು ಉರಿಯುತ್ತಿರುವ ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಐದರಿಂದ ಆರು ಗಂಟೆಗಳು ಬೇಕಾಯಿತು. ಈಗಲೂ ಅಗ್ನಿಶಾಮಕದಳ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಇಂದು ಮುಂಜಾನೆ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಆಭರಣ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಈವರೆಗೆ 17 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಎಂಟು ಮಕ್ಕಳು. ಹಲವು ಮಂದಿಗೆ ಗಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...