ದೆಹಲಿ: ಏಮ್ಸ್‌ನಲ್ಲಿ ಬೆಂಕಿ ಅವಘಡ; ರೋಗಿಗಳ ಸ್ಥಳಾಂತರ

Date:

ದೆಹಲಿಯ ಏಮ್ಸ್‌ ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

6 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಬೆಳಿಗ್ಗೆ 11.54 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡ ನಂತರ ತುರ್ತು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಎಲ್ಲ ರೋಗಿಗಳನ್ನು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಏಮ್ಸ್‌ ನಿರ್ದೇಶಕರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊರರೋಗಿ ವಿಭಾಗದ ಒಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣದಲ್ಲಿ ರಕ್ಷಣಾ ಕಾರ್ಯಪಡೆ ಕೈಗೊಂಡ ಹಿನ್ನೆಲೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 2 ಕೋಟಿ ರೂ. ನೀಡುವಂತೆ ಆಸ್ಕರ್‌ ಪ್ರಶಸ್ತಿ ವಿಜೇತ ನಿರ್ಮಾಪಕರಿಗೆ ಮಾವುತ ದಂಪತಿಯಿಂದ ನೋಟಿಸ್

ಘಟನೆಯಿಂದ ಇದುವರೆಗೆ ಆಸ್ತಿಪಾಸ್ತಿಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಕೂಡ ತಿಳಿದುಬಂದಿಲ್ಲ. ಕಟ್ಟಡದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲ ಮಾಧ್ಯಮಗಳ ವರದಿ ಪ್ರಕಾರ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...