ಮಧ್ಯಪ್ರದೇಶ | ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ

Date:

ಮಧ್ಯಪ್ರದೇಶದ ಕುರ್ವೈ ಕೆಥೋರಾ ನಿಲ್ದಾಣದಲ್ಲಿ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಒಂದು ಬೋಗಿಯಲ್ಲಿನ ಬ್ಯಾಟರಿ ಪೆಟ್ಟಿಗೆಗೆ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರೈಲು ಬೆಳಗ್ಗೆ 5.40 ರ ಸುಮಾರಿಗೆ ಭೋಪಾಲ್‌ನಿಂದ ಹೊರಟು ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣವನ್ನು ಮಧ್ಯಾಹ್ನ 1.10 ರ ಸುಮಾರಿಗೆ ತಲುಪುತ್ತದೆ.

ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡು ಚಕ್ರಗಳ ಬಳಿಯಿಂದ ಹೊಗೆ ಹೊರಹೊಮ್ಮುವ ಸ್ಥಳದ ದೃಶ್ಯಗಳು ಮಾಧ್ಯಮಗಳಲ್ಲಿ ವರದಿಯಾಗಿದೆ. ಅಗ್ನಿಶಾಮಕ ದಳವು ಕ್ಷಿಪ್ರವಾಗಿ ಬೆಂಕಿಯನ್ನು ನಂದಿಸಿದ್ದು, ಇಲಾಖೆಯು ಘಟನೆಗೆ ಕಾರಣಗಳನ್ನು ಪರೀಕ್ಷಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 ಉಡಾವಣೆ| ಎಲ್ಲ ಮಾಜಿ ಪ್ರಧಾನಿಗಳ ದೂರದೃಷ್ಟಿಗೆ ಸಾಕ್ಷಿ: ಖರ್ಗೆ ಶ್ಲಾಘನೆ

ಬೆಂಕಿ, ಬ್ಯಾಟರಿ ಬಾಕ್ಸ್‌ಗೆ ಸೀಮಿತವಾಗಿದೆ. ತಾಂತ್ರಿಕ ಪರೀಕ್ಷೆ ಮುಗಿದ ತಕ್ಷಣ ರಾಷ್ಟ್ರ ರಾಜಧಾನಿಗೆ ರೈಲು ತೆರಳಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ‘ವಂದೇ ಭಾರತ್’ ಜಾನುವಾರುಗಳು ಗುದ್ದಿ ದೋಷವುಂಟಾಗಿರುವ ಬಗ್ಗೆ ಸುದ್ದಿಯಾಗಿತ್ತು. ಇತ್ತೀಚಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಂಸತ್ತಿಗೆ ನೀಡಿದ ಉತ್ತರದ ಪ್ರಕಾರ, ಕಳೆದ ವರ್ಷ ಜೂನ್ ಮತ್ತು ಡಿಸೆಂಬರ್ ನಡುವೆ, ವಂದೇ ಭಾರತ್ ರೈಲುಗಳು ಪ್ರಾಣಿಗಳ ಘರ್ಷಣೆಯಿಂದ 68 ಪ್ರಕರಣಗಳು ಉಂಟಾಗಿವೆ. ಇದಲ್ಲದೆ ಹಲವು ಕಡೆ ರೈಲಿನ ಮೇಲೆ ಕಲ್ಲು ತೂರಾಟದ ಅನೇಕ ಘಟನೆಗಳು ನಡೆದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...