ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ; ಐವರು ಸಾವು

Date:

ಉತ್ತರ ಪ್ರದೇಶದ ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

ಲೋನಿ ಬಾರ್ಡರ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಹ್ತಾ ಹಾಜಿಪುರದಲ್ಲಿರುವ ಕಟ್ಟಡದಲ್ಲಿ ಬುಧವಾರ-ಗುರುವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ, ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಕಟ್ಟಡದಿಂದ ಮಹಿಳೆ ಮತ್ತು ಮಗುವನ್ನು ರಕ್ಷಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಎಸಿಪಿ) ಅಂಕುರ್ ವಿಹಾರ್ ಭಾಸ್ಕರ್ ವರ್ಮಾ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಮೊದಲ ಮತ್ತು ಎರಡನೇ ಮಹಡಿಗೆ ವ್ಯಾಪಿಸಿದೆ. ಬೆಂಕಿಯ ಜ್ವಾಲೆಗೆ ನಿವಾಸಿಗಳು ಸಿಕ್ಕಿಕೊಂಡಿದ್ದಾರೆ. ಕಟ್ಟಡದಿಂದ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಘಾಜಿಯಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಮೃತರನ್ನು ಸೈಫುಲ್ ರೆಹಮಾನ್ (35), ಅವರ ಪತ್ನಿ ನಜೀರಾ (32), ಮಗಳು ಇಸ್ರಾ (7), ಫೈಜ್ (7 ತಿಂಗಳ) ಮತ್ತು ಫರ್ಹೀನ್ ಅಲಿಯಾಸ್ ಪರ್ವೀನ್ (25) ಎಂದು ಗುರುತಿಸಲಾಗಿದೆ.

ಗಾಯಗೊಂಡ ಅರ್ಶ್ (10) ಮತ್ತು ಉಜ್ಮಾ (25) ಅವರನ್ನು ದೆಹಲಿಯ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...