ಉತ್ತರಕಾಶಿ | ಭೀಕರ ಅಗ್ನಿ ಅವಘಡ: ಮಹಿಳೆ ಸಾವು, ಹತ್ತು ಮನೆಗಳು ನಾಶ

Date:

ಉತ್ತರಕಾಶಿ ಜಿಲ್ಲೆಯ ಮೋರಿ ಬ್ಲಾಕ್‌ನ ಸವಾನಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಸುಮಾರು ಹತ್ತು ಮನೆಗಳು ನಾಶವಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಜಿಲ್ಲಾ ಆಡಳಿತ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್), ಪೊಲೀಸರು, ಅಗ್ನಿಶಾಮಕ ಸೇವೆಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.

ಇದನ್ನು ಓದಿದ್ದೀರಾ? ಟರ್ಕಿ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ; 76 ಮಂದಿ ದುರ್ಮರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭಿಕ ವರದಿ ಪ್ರಕಾರ ಸುಮಾರು 8ರಿಂದ 10 ಮನೆಗಳು ನಾಶವಾಗಿದೆ. ಸುಮಾರು 25 ಮನೆಗಳಿಗೆ ಹಾನಿ ಉಂಟಾಗಿದೆ ಎಂದು ವರದಿಯಾಗಿದೆ. ಈ ಅಗ್ನಿ ದುರಂತದಲ್ಲಿ ಸವಾನಿ ಗ್ರಾಮದ 75 ವರ್ಷದ ಬ್ರಹ್ಮ ದೇವಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಉತ್ತರಕಾಶಿಯ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಭಾನುವಾರ ರಾತ್ರಿ 10:40ರ ಸುಮಾರಿಗೆ ಅಗ್ನಿ ದುರಂತದ ಬಗ್ಗೆ ಮಾಹಿತಿ ಲಭಿಸಿದೆ. ಕೂಡಲೇ ಮೋರಿ ಮತ್ತು ನೌಗಾಂವ್‌ನಲ್ಲಿರುವ ಎಸ್‌ಡಿಆರ್‌ಎಫ್, ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳು, ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ 5 ಕಿ.ಮೀ. ಕಾಲ್ನಡಿಗೆ ದಾರಿ ಮಾತ್ರವಿದ್ದು ಇದು ತಂಡಕ್ಕೆ ದೊಡ್ಡ ಸವಾಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಮೆಹರ್ಬಾನ್ ಸಿಂಗ್ ಬಿಶ್ತ್, “ಮೋರಿಯ ತಹಶೀಲ್ದಾರ್ ಅವರು ಹೆಚ್ಚುವರಿ ಕಂದಾಯ ಸಿಬ್ಬಂದಿ ಮತ್ತು ರಕ್ಷಣಾ ಸಾಮಾಗ್ರಿಗಳೊಂದಿಗೆ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಸ್ಥಳಕ್ಕೆ ತಲುಪಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪ್ರಯಾಗ್‌ರಾಜ್‌ | ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ

ಹಾಗೆಯೇ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವಾನಂದ್ ಶರ್ಮಾ, ಕಂದಾಯ ಮತ್ತು ಅರಣ್ಯ ಇಲಾಖೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಕಾರ್ಯಾಚರಣೆ ಸಹಾಯವಾಗಲು ಹತ್ತಿರದ ಪ್ರದೇಶಗಳಿಂದ ಹೆಚ್ಚುವರಿ ತಂಡಗಳನ್ನು ಕಳುಹಿಸಲಾಗಿದೆ. ವೈದ್ಯಕೀಯ ಮತ್ತು ಕುಡಿಯುವ ನೀರು ಸೇವೆಗಳು ಸೇರಿದಂತೆ ಎಲ್ಲಾ ಸಂಬಂಧಿತ ಇಲಾಖೆಗಳಿಗೆ ತ್ವರಿತವಾಗಿ ಸೇವೆ ನೀಡುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸದ್ಯ ಈ ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ನಿರಾಶ್ರಿತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...