ಪಂಜಾಬ್ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಐವರು ಕಾರ್ಮಿಕರ ಸಾವು, 34 ಮಂದಿಗೆ ಗಾಯ

Date:

ಎರಡು ಅಂತಸ್ತಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ ಘಟನೆ ಪಂಜಾಬ್‌ನ ಮುಕ್ತಸರ್ ಜಿಲ್ಲೆಯ ಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದಾರೆ.

ಲಂಬಿ ಕ್ಷೇತ್ರದ ಸಿಂಗ್‌ವಾಲಾ ಗ್ರಾಮದಲ್ಲಿ ತಾರ್ಸೆಮ್ ಸಿಂಗ್ ಎಂಬವರ ಒಡೆತನದ ಕಾರ್ಖಾನೆಯಲ್ಲಿ ಸ್ಪೋಟ ಸಂಂಭವಿಸಿದೆ. ಎರಡು ಅಂತಸ್ತಿನ ಕಟ್ಟಡವೇ ನೆಲಸಮವಾಗಿದೆ. ಹಲವು ಮಂದಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ನಾಲ್ವರು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ. ಈ ಕಾರ್ಖಾನೆಯ ಕಾರ್ಮಿಕರಲ್ಲಿ ಬಹುತೇಕರು ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದವರು. ಮಧ್ಯರಾತ್ರಿ 12 ರಿಂದ ಬೆಳಗಿನ ಜಾವ 1 ಗಂಟೆಯ ನಡುವೆ ಸಂಭವಿಸಿದೆ ಎನ್ನಲಾಗಿದೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್‌ಪಿ) ಜಸ್ಪಾಲ್ ಸಿಂಗ್, “ನಮ್ಮ ತಂಡವು ಶೀಘ್ರ ಸ್ಥಳಕ್ಕೆ ಧಾವಿಸಿದೆ. ಈವರೆಗೆ ಐವರ ಮೃತದೇಹ ಪತ್ತೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 28 ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ” ಎಂದಿದ್ದಾರೆ.

ಪಟಾಕಿಗಳ ತಯಾರಿಕೆ ಮತ್ತು ಪ್ಯಾಕೇಜಿಂಗ್ ಎರಡನ್ನೂ ಒಂದೇ ಆವರಣದಲ್ಲಿ ನಡೆಸಲಾಗುತ್ತಿತ್ತು. ಇದಲ್ಲದೆ, ಹಲವಾರು ಕಾರ್ಮಿಕರು ಅದೇ ಕಟ್ಟಡದ ಒಳಗೆ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...