ಬಿಜೆಪಿಯ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹಾಳಾಗುತ್ತಿದ್ದು, ಜಮೀನು ವಿವಾದವೊಂದರ ಸಂಬಂಧ ಹಾಡಹಗಲೇ ನಡುರಸ್ತೆಯಲ್ಲೇ ಗುಂಪುಗಳ ನಡುವೆ ಗುಂಡಿನ ಕಾಳಗ ಘಟನೆ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.
ಉತ್ತರ ಪ್ರದೇಶದ ಬರೇಲಿಯ ಇಜ್ಜತ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಬರೇಲಿಯ ಇಜ್ಜತ್‌ನಗರ ಪ್ರದೇಶದಲ್ಲಿ ಜಮೀನೊಂದನ್ನು ವಶಪಡಿಸಿಕೊಳ್ಳುವ ಕುರಿತು ಗಲಾಟೆ ನಡೆದಿದೆ. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಪಿಲಿಭಿತ್ ಬೈಪಾಸ್‌ನಲ್ಲಿ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ, ಸ್ಥಳದಲ್ಲಿದ್ದ ಎರಡು ಬುಲ್ಡೋಝರ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
This is not a film shooting setup but actual crime scene in UP’s Bareilly. Two groups opened fire at each other and a JCB was setup on fire after a dispute over a property turned violent. @Uppolice officials were yet to reach the spot. Fortunately no passerby was hurt. pic.twitter.com/tPQfcF6zcX
— Kanwardeep singh (@KanwardeepsTOI) June 22, 2024
ಸುಮಾರು 30 ನಿಮಿಷಗಳ ಕಾಲ ರಸ್ತೆಯಲ್ಲಿ ಗುಂಡಿನ ಕಾಳಗ ನಡೆದಿತ್ತು, ಈ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಪೊಲೀಸರು ಬರುವುದನ್ನು ಅರಿತ ಗುಂಡಿನ ಕಾಳಗದಲ್ಲಿ ನಿರತರಾಗಿದ್ದವರ ಪೈಕಿ ಕೆಲವರು ಪರಾರಿಯಾಗಿದ್ದಾರೆ. ಎರಡು ಗುಂಪಿನ ಪೈಕಿ ಒಂದು ಗುಂಪಿನ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ಹಲವು ವೀಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಸಿನಿಮಾ ಶೈಲಿಯಲ್ಲಿ ನಡುರಸ್ತೆಯಲ್ಲೇ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಅದೃಷ್ಟವಶಾತ್ ಯಾವುದೇ ಸಾರ್ವಜನಿಕರಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ.
This isn’t Mirzapur Season 3 shooting. But actual crime scene from Bareilly, UP. Two groups of Aditya Upadhyay & Rajeev Rana open fire at each other. JCB set on fire. Aditya Upadhyay, his son Aviral Upadhyay are arrested, others are yet to be arrested. pic.twitter.com/U6DI3bf8J5
— Mohammed Zubair (@zoo_bear) June 22, 2024
“ಜಮೀನು ವಿವಾದಕ್ಕೆ ಸಂಬಂಧಿಸಿ ಆದಿತ್ಯ ಉಪಾಧ್ಯಾಯ ಮತ್ತು ರಾಜೀವ್ ರಾಣಾ ಎಂಬ ಎರಡು ಗುಂಪುಗಳ ನಡುವೆ ಪರಸ್ಪರ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಜ್ಜತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಯ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಜಯ್ ಮತ್ತು ರೋಹಿತ್ ಎಂಬ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಅನಿತಾ ಚೌಹಾಣ್ ತಿಳಿಸಿದ್ದಾರೆ.
BJP का जंगलराज
📍 यूपी pic.twitter.com/vIxMZOueDE
— Congress (@INCIndia) June 22, 2024





