ಮೊದಲ ಹಂತದ ಚುನಾವಣೆ | ಏಪ್ರಿಲ್ 17ರಂದು ಬಹಿರಂಗ ಪ್ರಚಾರಕ್ಕೆ ತೆರೆ

Date:

ಬಿರು ಬಿಸಿಲಿನ ನಡುವೆ ದೇಶದೆಲ್ಲೆಡೆ ಚುನಾವಣೆ ಕಾವು ಜೋರಾಗಿದೆ. ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಏಪ್ರಿಲ್ 17ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಬಾರಿ ಲೋಕಸಭಾ ಚುನಾವಣೆಯು ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 19ರಿಂದ ಮತದಾನ ನಡೆಯಲಿದೆ. ಜೂನ್‌ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಏ.19ರಂದು (ಶುಕ್ರವಾರ) ಮತದಾನ ನಡೆಯಲಿದ್ದು, ಗುರುವಾರ ಸಂಜೆವರೆಗೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮತದಾರರ ಮನೆಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿದೆ. ಮೊದಲ ಹಂತದ ಚುನಾವಣೆಗಳು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜೂ.4ರಂದು ಎಲ್ಲ 7 ಹಂತದ ಚುನಾವಣೆ ಮುಗಿದ ಬಳಿಕ ಒಟ್ಟಿಗೆ ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಹಂತದಲ್ಲಿ ತಮಿಳುನಾಡಿನ 39 ಕ್ಷೇತ್ರಗಳು, ರಾಜಸ್ಥಾನದ 12 ಲೋಕಸಭಾ ಕ್ಷೇತ್ರಗಳು, ಉತ್ತರ ಪ್ರದೇಶದ 8 ಕ್ಷೇತ್ರಗಳು, ಮಧ್ಯ ಪ್ರದೇಶದ 6 ಕ್ಷೇತ್ರಗಳು, ಉತ್ತರಾಖಂಡ ಮತ್ತು ಮಹಾರಾಷ್ಟ್ರ, ಅಸ್ಸಾಂನ ತಲಾ 5 ಕ್ಷೇತ್ರಗಳು, ಬಿಹಾರದ 4 ಕ್ಷೇತ್ರ, ಪಶ್ಚಿಮ ಬಂಗಾಳದ 3 ಕ್ಷೇತ್ರ, ಮಣಿಪುರ, ಅರುಣಾಚಲ ಪ್ರದೇಶ, ಮೇಘಾಲಯ ತಲಾ 2 ಕ್ಷೇತ್ರಗಳು, ಪುದುಚೆರಿ, ಅರುಣಾಚಲ ಪ್ರದೇಶ, ಛತ್ತೀಸ್ಘಡ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿದ್ದ ಬೆಂಗಳೂರು ಎಸ್ಐ ಈಗ ಐಎಎಸ್ ಅಧಿಕಾರಿ

ಮೊದಲ ಹಂತದ ಚುನಾವಣೆಗೆ 20 ರಾಜ್ಯಗಳಲ್ಲಿ ಮಾ.20 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾ.27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಬಿಹಾರದಲ್ಲಿ ಮಾತ್ರ ಹಬ್ಬದ ಕಾರಣಕ್ಕೆ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಮಾರ್ಚ್ 28 ಕೊನೆಯ ದಿನವಾಗಿತ್ತು. ಬಿಹಾರದಲ್ಲಿ ಮಾರ್ಚ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಸಿ, ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 2 ಕೊನೆಯ ದಿನವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...