ರಾಷ್ಟ್ರಪತಿ ಆಡಳಿತದ ಬಳಿಕ ಮೊದಲ ರಾಜಕೀಯ ಮಾತುಕತೆ; ಅಸ್ಸಾಂ ಮುಖ್ಯಮಂತ್ರಿ ಭೇಟಿ ಮಾಡಿದ ಬಿಜೆಪಿ ಶಾಸಕರು

Date:

ಫೆಬ್ರವರಿಯಲ್ಲಿ ರಾಷ್ಟ್ರಪತಿ ಆಡಳಿತ ಆರಂಭವಾದಾಗಿನಿಂದ ಮೊದಲ ಬಾರಿಗೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಏಳು ಶಾಸಕರು ಗುವಾಹಟಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿದ್ದು, ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ನಾಯಕತ್ವದ ಆಯ್ಕೆಗಳ ಹುಡುಕಾಟಕ್ಕೆ ಸಹಾಯ ಕೋರಿದರು. ಹಾಗಾಗಿ ಶರ್ಮಾ ಜೂನ್ 10ರಂದು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.

ಬಿಜೆಪಿಯ ಕೆ ಗೋವಿಂದಾಸ್ ಸಿಂಗ್, ಎಲ್ ಸುಸಿಂದ್ರೋ ಮೀಟಿ, ಜೆಡಿಯುನ ಅಬ್ದುಲ್ ನಾಸಿರ್ ಮತ್ತು ಎನ್‌ಪಿಪಿ ನಾಯಕರಾದ ಶಾಂತಿ ಸಿಂಗ್ ಮತ್ತು ಎಂ ರಾಮೇಶ್ವರ್ ಸಿಂಗ್ ಅವರನ್ನು ಒಳಗೊಂಡ ಸಭೆಯು ಥಡೌ ಸಮುದಾಯ ಉತ್ಸವದ ಹೊರತಾಗಿ ನಡೆದಿದೆ.

ಒಮ್ಮತದ ಸಿಎಂ ಹುಡುಕುವ ಪ್ರಯತ್ನಗಳು ಈವರೆಗೆ ಸಫಲವಾಗಿಲ್ಲ. ದೀರ್ಘಕಾಲದ ಜನಾಂಗೀಯ ಹಿಂಸಾಚಾರದ ನಂತರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಫೆಬ್ರವರಿ 9ರಂದು ರಾಜೀನಾಮೆ ನೀಡಿದ್ದರು. ಬಳಿಕ ಫೆಬ್ರವರಿ 13ರಂದು ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಪೀಕರ್ ಥೋಕ್ಚೊಮ್ ಸತ್ಯಬ್ರತಾ ಸಿಂಗ್ ಮತ್ತು ಮಾಜಿ ಸಚಿವ ಯುಮ್ನಮ್ ಖೇಮ್‌ ಚಂದ್‌ ಸಿಂಗ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಉನ್ನತ ಹುದ್ದೆಯ ಸ್ಪರ್ಧೆಯಲ್ಲಿದ್ದಾರೆಂದು ಹೇಳಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ವಕ್ಫ್​ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಣಿಪುರ ರಾಜಧಾನಿ ಬಳಿಯ ಚರ್ಚಂದಪುರದಲ್ಲಿ 2023 ಮೇ ವೇಳೆ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಗಲಾಟೆ ಶುರುವಾಯಿತು. ಮೈತೇಯಿ ಸಮುದಾಯ ತಮಗೂ ಬುಡಕಟ್ಟು ಸ್ಥಾನಮಾನ ಕೊಡಿ ಎಂದು ಇಟ್ಟಿದ್ದ ಬೇಡಿಕೆಗೆ ಕುಕಿ ಸಮುದಾಯ ವಿರೋಧ ವ್ಯಕ್ತಪಡಿಸಿದ ಕಾರಣ ಆರಂಭವಾದ ಗಲಾಟೆ ಈವರೆಗೆ ನಡೆಯುತ್ತಲೇ ಇದೆ. ಕೊನೆಗೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಫೆಬ್ರವರಿ 9ರಂದು ರಾಜೀನಾಮೆ ನೀಡಿ, ರಾಷ್ಟ್ರಪತಿ ಆಡಳಿತ ಆರಂಭವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...