ಜಾರ್ಖಂಡ್‌ | ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಬಳಿಕ ಐವರು ಮಕ್ಕಳಲ್ಲಿ ಎಚ್ಐವಿ ಸೋಂಕು ಪತ್ತೆ

Date:

ಆಸ್ಪತ್ರೆಯೊಂದರಲ್ಲಿ ರಕ್ತ ವರ್ಗಾವಣೆ ಬಳಿಕ ಐವರು ಮಕ್ಕಳಲ್ಲಿ ಎಚ್ಐವಿ ಸೋಂಕು ಪತ್ತೆಯಾಗಿರುವ ಘಟನೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ನಡೆದಿದೆ. ಇದಾದ ಬಳಿಕ ಆರೋಗ್ಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಿವಿಲ್ ಸರ್ಜನ್ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ. ಹಾಗೆಯೇ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಚಿಕಿತ್ಸೆಯೊಂದಿಗೆ, ಪೀಡಿತ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಹೇಮಂತ್ ಸೊರೇನ್, “ಚೈಬಾಸಾದಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ಎಚ್‌ಐವಿ ಸೋಂಕಿತ ರಕ್ತ ವರ್ಗಾವಣೆ ಮಾಡಲಾಗಿದೆ. ಇದಾದ ಬಳಿಕ ಪಶ್ಚಿಮ ಸಿಂಗ್‌ಭೂಮ್ ಸಿವಿಲ್ ಸರ್ಜನ್ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಲು ಸೂಚನೆಗಳನ್ನು ನೀಡಲಾಗಿದೆ” ಎಂದು ಬರೆದಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಎಚ್‌ಐವಿ ಸೋಂಕು ನಿರ್ಮೂಲನಾ ಆಂದೋಲನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್ ಆರಂಭದಲ್ಲಿ ಮಕ್ಕಳಿಗೆ ಸೋಂಕಿತ ರಕ್ತ ವರ್ಗಾವಣೆ ಮಾಡಲಾಗಿದೆ. ಅಕ್ಟೋಬರ್ 18ರಂದು ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಮಗುವಿಗೆ ಎಚ್‌ಐವಿ ಇರುವುದು ಕಂಡುಬಂದಿದೆ. ಈ ವೇಳೆ ವೈದ್ಯಕೀಯ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಗುವಿನ ಕುಟುಂಬವು ಜಿಲ್ಲಾಧಿಕಾರಿ ಮತ್ತು ರಾಜ್ಯ ಅಧಿಕಾರಿಗಳಿಗೆ ದೂರು ನೀಡಿದೆ.

ಜಾರ್ಖಂಡ್ ಹೈಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ ಶುಕ್ರವಾರ ತನಿಖೆಗೆ ಆದೇಶಿಸಿದೆ. ಮರುದಿನ, ರಾಂಚಿಯ ಐದು ಸದಸ್ಯರ ತಂಡವು ಚೈಬಾಸಾಗೆ ಭೇಟಿ ನೀಡಿ ಸದರ್ ಆಸ್ಪತ್ರೆಯಲ್ಲಿ ವಿಚಾರಣೆ ನಡೆಸಿದೆ. ತಂಡವು ಆಸ್ಪತ್ರೆಯ ರಕ್ತ ನಿಧಿ ಮತ್ತು ಪಿಐಸಿಯು ವಾರ್ಡ್ ಅನ್ನು ಪರಿಶೀಲಿಸಿದ್ದು ಬಾಧಿತ ಮಕ್ಕಳ ಕುಟುಂಬಗಳಿಂದ ವಿವರವಾದ ಮಾಹಿತಿಯನ್ನು ಸಂಗ್ರಹಿಸಿದೆ.

ತನಿಖೆಯ ಸಮಯದಲ್ಲಿ, ಇನ್ನೂ ನಾಲ್ಕು ಮಕ್ಕಳಲ್ಲಿ ಎಚ್ಐವಿ ಪಾಸಿಟಿವ್ ಕಂಡುಬಂದಿದೆ. ಈ ಮಕ್ಕಳಲ್ಲಿ ಇಬ್ಬರು ಇನ್ನೂ ಸದರ್ ಆಸ್ಪತ್ರೆಯ ಪಿಐಸಿಯು ವಾರ್ಡ್‌ನಲ್ಲಿ ದಾಖಲಾಗಿದ್ದಾರೆ. ಸೋಂಕಿನ ಮೂಲವನ್ನು ನಿರ್ಧರಿಸಲು ಪ್ರಯತ್ನಗಳು ನಡೆಯುತ್ತಿವೆ. ಮಕ್ಕಳ ರಕ್ತ ಪರೀಕ್ಷೆಗಳನ್ನು ಮಾಡುವಂತೆ ಆಸ್ಪತ್ರೆ ಆಡಳಿತಕ್ಕೆ ನಿರ್ದೇಶಿಸಲಾಗಿದೆ ಎಂದು ಡಾ. ದಿನೇಶ್ ಕುಮಾರ್ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ವಿಜಯಪುರ | ಎಚ್‌ಐವಿ ಸೋಂಕಿನ ಕುರಿತು ಯುವಕರಲ್ಲಿ ಜಾಗೃತಿ ಅಗತ್ಯ: ಬಾಬುರಾವ ತಳವಾರ

“ಮಕ್ಕಳು ಎಚ್‌ಐವಿ ಸೋಂಕಿಗೆ ಒಳಗಾಗಲು ಎರಡು ಕಾರಣಗಳಿರಬಹುದು – ಸೋಂಕಿತ ರಕ್ತವನ್ನು ಅವರಿಗೆ ನೀಡಿರಬಹುದು ಅಥವಾ ಹೊರಗಿನ ಮೂಲಗಳಿಂದ ಸೋಂಕು ಅವರ ದೇಹಕ್ಕೆ ಬಂದಿರಬಹುದು. ಇದನ್ನು ತನಿಖೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 515 ಎಚ್‌ಐವಿ ಸೋಂಕಿತ ರೋಗಿಗಳಿದ್ದು, 56 ಥಲಸ್ಸೆಮಿಯಾ ರೋಗಿಗಳಿದ್ದಾರೆ. ಇಲಾಖೆಗೆ ಸಂಪೂರ್ಣ ವರದಿಯನ್ನು ಸಲ್ಲಿಸಲಾಗುವುದು” ಎಂದು ಹೇಳಿದರು.

ವೈದ್ಯಕೀಯ ತಂಡವು ರಕ್ತ ನಿಧಿ ಮತ್ತು ಪ್ರಯೋಗಾಲಯದ ತಪಾಸಣೆಯ ಸಮಯದಲ್ಲಿ ಹಲವು ನ್ಯೂನತೆಗಳು ಮತ್ತು ಗಂಭೀರ ಅಕ್ರಮಗಳನ್ನು ಪತ್ತೆಹಚ್ಚಿದೆ. ರಕ್ತ ನಿಧಿ ಮತ್ತು ಪ್ರಯೋಗಾಲಯದಲ್ಲಿನ ನ್ಯೂನತೆಗಳನ್ನು ಸರಿಪಡಿಸಲು ಅವರಿಗೆ ಒಂದು ವಾರದ ಕಾಲಾವಕಾಶ ನೀಡಲಾಗಿದೆ ಎಂದು ಡಾ. ಕುಮಾರ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...